ಐರ್ಲೆಂಡ್ ವಿರುದ್ಧದ T20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ ನಿರಾಕರಿಸಿದ ಟೀಂ ಇಂಡಿಯಾ; ಸುನೀಲ್ ಗವಾಸ್ಕರ್ ಟೀಕೆ
ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಒಂದು ರನ್ ಅಂತರದ ಸೋಲನ್ನು ಅನುಭವಿಸಿತು. ಈ ಮೂಲಕ 0-2 ಅಂತರದಲ್ಲಿ ಸರಣಿ ಸೋಲು ಕಂಡಿತು.
ಐರ್ಲೆಂಡ್ ವಿರುದ್ಧದ ಟಿ20 ಸರಣಿ ಸಮಯದಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡದಿರುವ ಬಗ್ಗೆ ಭಾರತೀಯ ಕ್ರಿಕೆಟ್ ತಂಡದ ದಂತಕಥೆ ಸುನೀಲ್ ಗವಾಸ್ಕರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. 15 ವರ್ಷದ ಈ ಆಟಗಾರ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ ಮತ್ತು ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅವರನ್ನು ಪ್ಲೇಯಿಂದ್ XI ನಲ್ಲಿ ಸೇರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಹೇಳಿದ್ದಾರೆ.
ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಒಂದು ರನ್ ಅಂತರದ ಸೋಲನ್ನು ಅನುಭವಿಸಿತು. ಈ ಮೂಲಕ 0-2 ಅಂತರದಲ್ಲಿ ಸರಣಿ ಸೋಲು ಕಂಡಿತು.
'ಐರ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ಚೊಚ್ಚಲ ಪ್ರವೇಶ ನೀಡಬೇಕೆಂದು ನಾನು ನಿರೀಕ್ಷಿಸಿದ್ದೆ. ಅವರು ಎರಡೂ ಪಂದ್ಯಗಳನ್ನು ಆಡುತ್ತಾರೆ ಎಂದು ನಾನು ಭಾವಿಸಿದ್ದೆ. ಮುಂಬರುವ ಕಠಿಣ ಪರೀಕ್ಷೆಗಳ ಮೊದಲು ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸುಲಭವಾಗಿ ಸೇರಿಸಿಕೊಳ್ಳಲು ಅದು ಉತ್ತಮ ಮಾರ್ಗವಾಗುತ್ತಿತ್ತು' ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.
ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಒಂದರಲ್ಲಿ ಸೂರ್ಯವಂಶಿ ಅಭಿಷೇಕ್ ಶರ್ಮಾ ಅಥವಾ ಸಂಜು ಸ್ಯಾಮ್ಸನ್ ಅವರೊಂದಿಗೆ ಇನಿಂಗ್ಸ್ ಆರಂಭಿಸಬೇಕಿತ್ತು. ಅವರಿಗೆ ಖಂಡಿತವಾಗಿಯೂ ಅವಕಾಶ ಸಿಗುತ್ತದೆ. ಇಂತಹ ಆಟಗಾರರನ್ನು ನೀವು ಹೆಚ್ಚು ಕಾಲ ನಿರ್ಲಕ್ಷ್ಯಿಸುವುದಿಲ್ಲ. ಐರ್ಲೆಂಡ್‌ನಲ್ಲಿ ಇಲ್ಲದಿದ್ದರೆ, ಇಂಗ್ಲೆಂಡ್ ಸರಣಿಯಲ್ಲಿ ಅವರು ತಂಡದಲ್ಲಿರಬೇಕು' ಎಂದು ಗವಾಸ್ಕರ್ ಹೇಳಿದರು.
ಐಪಿಎಲ್ 2026ರ ಅದ್ಭುತ ಆವೃತ್ತಿಯ ನಂತರ ಯುವ ಆಟಗಾರನ ಸುತ್ತ ಸಾಕಷ್ಟು ಚರ್ಚೆಗಳು ನಡೆದವು. ಹಿರಿಯರ ತಂಡಕ್ಕೆ ಆಯ್ಕೆಯಾದರೂ ಕೂಡ ವೈಭವ್ ಸೂರ್ಯವಂಶಿಗೆ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸದ್ಯ ಸ್ಥಾನ ಸಿಕ್ಕಿಲ್ಲದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಈಮಧ್ಯೆ, ಎರಡನೇ ಟಿ20ಐನಲ್ಲಿ ಐರ್ಲೆಂಡ್ ಭಾರತವನ್ನು ಕೇವಲ 1 ರನ್ ಅಂತರದಿಂದ ಸೋಲಿಸಿ ಎರಡು ಪಂದ್ಯಗಳ ಸರಣಿಯಲ್ಲಿ 2-0 ಅಂತರದ ಐತಿಹಾಸಿಕ ಗೆಲುವು ದಾಖಲಿಸಿತು. ಯಾವುದೇ ಸ್ವರೂಪದಲ್ಲಿ ಭಾರತದ ವಿರುದ್ಧ ಐರ್ಲೆಂಡ್ ಸಾಧಿಸಿದ ಮೊದಲ ಸರಣಿ ಗೆಲುವು ಇದಾಗಿದೆ. ಕೆಲವು ದಿನಗಳ ಹಿಂದೆ ಅವರು ಮೊದಲ ಪಂದ್ಯದಲ್ಲಿ ಹಾಲಿ ಟಿ20 ವಿಶ್ವ ಚಾಂಪಿಯನ್‌ಗಳನ್ನು 34 ರನ್‌ಗಳಿಂದ ಸೋಲಿಸಿದ್ದರು.
ಐರ್ಲೆಂಡ್ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳಿಗೆ 154 ರನ್ ಗಳಿಸಿತು. ಪ್ರಿನ್ಸ್ ಯಾದವ್ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿದರೂ, ಭಾರತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗಳಿಗೆ 153 ರನ್ ಗಳಿಸಲು ಮಾತ್ರ ಸಾಧ್ಯವಾಯಿತು.
ಉಪನಾಯಕ ತಿಲಕ್ ವರ್ಮಾ 46 ಎಸೆತಗಳಲ್ಲಿ 55 ರನ್ ಗಳಿಸುವ ಮೂಲಕ ಪ್ರವಾಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಐರ್ಲೆಂಡ್ ಪರ ಜೈ ಮೂಂದ್ರ ಮತ್ತು ಮ್ಯಾಟ್ ಹೊಲ್ಲಾರ್ಡ್ ತಲಾ ಮೂರು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


