IPL 2026: RCB ಅಭಿಮಾನಿಗಳಿಗೆ ಗುಡ್ ನ್ಯೂಸ್! ಅನುಮಾನಕ್ಕೆ ತೆರೆ
ಬೆಂಗಳೂರಿನ ಹೆಮ್ಮೆಯ ‘ಚಿನ್ನಸ್ವಾಮಿ ಕ್ರೀಡಾಂಗಣ’ ಆರ್ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸುವುದು ಖಚಿತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಲೀಗ್ ಪಂದ್ಯಗಳು ನಡೆಯಲಿವೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಾರಿ ಬೆಂಗಳೂರಿನಲ್ಲಿ IPL ಪಂದ್ಯ ನಡೆಯಲಿದೆಯೋ ಅಥವಾ ಇಲ್ಲವೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದೆ.
ಬೆಂಗಳೂರಿನ ಹೆಮ್ಮೆಯ ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಉದ್ಘಾಟನಾ ಪಂದ್ಯ ನಡೆಯಲಿದ್ದು, ಆರ್ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸುವುದು ಖಚಿತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಲೀಗ್ ಪಂದ್ಯಗಳು ನಡೆಯಲಿವೆ
ಆರ್ಸಿಬಿ ಮ್ಯಾನೇಜ್ಮೆಂಟ್ ಕೈಗೊಂಡ ನಿರ್ಧಾರದಂತೆ ಈ ಸೀಸನ್ನ ಒಟ್ಟು 7 ತವರು ಪಂದ್ಯಗಳಲ್ಲಿ (Home Matches) 5 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಉಳಿದ 2 ಪಂದ್ಯಗಳನ್ನು ಛತ್ತೀಸ್ಗಢದ ರಾಯ್ಪುರದಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.
ಭದ್ರತೆ ಮತ್ತು ತಾಂತ್ರಿಕ ಸವಾಲುಗಳನ್ನು ಸರಿದೂಗಿಸಲು ಈ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗವು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ಕ್ರೀಡಾಂಗಣದ ಸುರಕ್ಷತೆ ಮತ್ತು ನ್ಯಾ. ಕುನ್ಹಾ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ನಿಯೋಗವು ಸರ್ಕಾರಕ್ಕೆ ಭರವಸೆ ನೀಡಿತ್ತು.
ಅದರಂತೆ ಪಂದ್ಯಗಳನ್ನು ಇದೀಗ KSCA ಮತ್ತು RCB ಮ್ಯಾನೇಜ್ಮೆಂಟ್ ಕಸರತ್ತು ನಡೆಸಿ, ಪಂದ್ಯಗಳನ್ನು ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ.
ಕಳೆದ ಬಾರಿಯ ಚಾಂಪಿಯನ್ನರG ತವರು ನೆಲದಲ್ಲಿ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಈ ಬಾರಿಯೂ ಅದ್ಧೂರಿ ಆರಂಭಕ್ಕೆ ಸಿದ್ಧತೆಗಳು ಆರಂಭವಾಗಿವೆ. ಮಾರ್ಚ್ 17ರಿಂದ ಅಧಿಕೃತವಾಗಿ ಐಪಿಎಲ್ ಪಂದ್ಯಗಳು ಆರಂಭವಾಗುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



