T20 ವಿಶ್ವಕಪ್ 2026: 'ನನಗಲ್ಲ.. Player of generation'ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಲ್ಲಬೇಕು; ಸ್ಟಾರ್ ಆಟಗಾರನ ಶ್ಲಾಘಿಸಿದ Sanju Samson!
ಭಾರತದ ಅನುಭವಿ ಬೌಲರ್ ಗಳ ಕರಾರುವಕ್ಕಾದ ಬೌಲಿಂಗ್ ದಾಳಿ ನೆರವಿನಿಂದ ಭಾರತ ಸೋಲಿನಿಂದ ಪಾರಾಯಿತು.

ಮುಂಬೈ: ಇಂಗ್ಲೆಂಡ್ ವಿರುದ್ಧದ 2ನೇ ಸೆಮಿಫೈನಲ್ ನಲ್ಲಿ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಪಂದ್ಯಶ್ರೇಷ್ಠ ಪ್ರಶಸ್ತಿ ತಮಗಲ್ಲ.. 'player of generation'ಗೆ ಸಲ್ಲಬೇಕು ಎಂದು ಹೇಳಿ ಅಚ್ಚರಿ ಮೂಡಿಸಿದರು.
ನಿನ್ನೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 7 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.
ಭಾರತ ನೀಡಿದ್ದ 254 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ್ದ ಇಂಗ್ಲೆಂಡ್ ತಂಡ ಜೇಕಬ್ ಬೆಥಲ್ ಅವರ ಅಮೋಘ ಶತಕದ ನೆರವಿನಿಂದ ಗೆಲುನಂಚಿಗೆ ಬಂದು ತಲುಪಿತ್ತು. ಆದರೆ ಭಾರತದ ಅನುಭವಿ ಬೌಲರ್ ಗಳ ಕರಾರುವಕ್ಕಾದ ಬೌಲಿಂಗ್ ದಾಳಿ ನೆರವಿನಿಂದ ಭಾರತ ಸೋಲಿನಿಂದ ಪಾರಾಯಿತು.
ಇದೇ ವಿಚಾರವನ್ನು ಪಂದ್ಯ ಮುಕ್ತಾಯಬಳಿಕ ಪ್ರಶಸ್ತಿ ಪ್ರದಾನ ವೇಳೆ ಸಂಜು ಸ್ಯಾಮ್ಸನ್ ಮಾತನಾಡಿದರು. ಪಂದ್ಯಶ್ರೇಷ್ಠ ಪ್ರಶಸ್ತಿಯ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್, ಈ ಪ್ರಶಸ್ತಿ ಬುಮ್ರಾ ಅವರಿಗೆ ಸಲ್ಲಬೇಕಿತ್ತು ಎಂದು ಹೇಳಿದರು.
'ಜಸ್ ಪ್ರೀತ್ ಬುಮ್ರಾ ಅವರು ಕೊನೆ ಓವರ್ಗಳಲ್ಲಿ ಅಷ್ಟೊಂದು ಅದ್ಭುತವಾಗಿ ಬೌಲಿಂಗ್ ಮಾಡದಿದ್ದರೆ, ನಾನು ಇಲ್ಲಿ ನಿಲ್ಲುತ್ತಿರಲಿಲ್ಲ. ಈ ಎಲ್ಲಾ ಶ್ರೇಯಸ್ಸು ಅವರಿಗೇ ಸಲ್ಲಬೇಕು. ಅವರು ವಿಶ್ವದರ್ಜೆಯ ಬೌಲರ್, ಈ ಪೀಳಿಗೆಯ ಅತ್ಯುತ್ತಮ ಬೌಲರ್... ಇಂದು ಕೂಡ ಅವರು ತಮ್ಮ ಅಮೋಘ ದಾಳಿಯ ಮೂಲಕ ತಂಡಕ್ಕೆ ನರೆವಾದರು. ವಾಸ್ತವವಾಗಿ ಈ ಪ್ರಶಸ್ತಿ ಅವರಿಗೇ ಸಲ್ಲಬೇಕು' ಎಂದು ಸಂಜು ಸ್ಯಾಮ್ಸನ್ ಹೇಳಿದರು.
ಅಂದಹಾಗೆ ಸೂಪರ್–8ರ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಸಂಜು ಅವರು, ನಿನ್ನೆ (ಗುರುವಾರ) ನಡೆದ ಪಂದ್ಯದಲ್ಲೂ ಸ್ಫೋಟಕ 89 ರನ್ ಗಳಿಸಿ ಸತತ ಎರಡನೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



