T20 ವಿಶ್ವಕಪ್ 2026 ಫೈನಲ್: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ಭಾರತ ತಂಡದಲ್ಲಿ ಬದಲಾವಣೆ ಇಲ್ಲ!
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಹ್ಮದಾಬಾದ್ : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
2026 ರ ಟಿ20 ವಿಶ್ವಕಪ್ನ ಫೈನಲ್ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದ್ದು, ಗುಜರಾತ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಫೈನಲ್ ಪಂದ್ಯ ನಡೆಯುತ್ತಿದೆ.
ಇದು ಟೀಂ ಇಂಡಿಯಾದ ನಾಲ್ಕನೇ ಫೈನಲ್ ಆಗಿದ್ದು, ನ್ಯೂಜಿಲೆಂಡ್ ತನ್ನ ಎರಡನೇ ಫೈನಲ್ ಆಡುತ್ತಿದೆ. ಇಂದು ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಥ್ನರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ನ್ಯೂಜಿಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಮೆಕ್ ಕೊಂಚಿ ಬದಲಿಗೆ ಜೇಕಬ್ ಡಫಿ ಆಡುತ್ತಿದ್ದಾರೆ.
ಭಾರತ ತಂಡದಲ್ಲಿ ಬದಲಾವಣೆ ಇಲ್ಲ
ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಭಾರತ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತು ವರುಣ್ ಚಕ್ರವರ್ತಿ ಕಳಪೆ ಪ್ರದರ್ಶನ ನೀಡುತ್ತಿದ್ದು, ಇದು ಫೈನಲ್ ಪಂದ್ಯದಲ್ಲಿ ತಂಡದಲ್ಲಿ ಬದಲಾವಣೆಯಾಗುವ ಕುರಿತು ಚರ್ಚೆಗಳು ಏಳುವಂತೆ ಮಾಡಿತ್ತು.
ಆದರೆ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಯಾವುದೇ ಬದಲಾವಣೆ ಮಾಡದೇ ಇರಲು ನಿರ್ಧರಿಸಿದ್ದು, ಸೆಮೀಸ್ ಆಡಿದ ಅದೇ ತಂಡವನ್ನೇ ಕಣಕ್ಕಿಳಿಸಿದ್ದಾರೆ.
ತಂಡಗಳು ಇಂತಿವೆ.
ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ
ನ್ಯೂಜಿಲೆಂಡ್: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಜೇಕಬ್ ಡಫಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



