T20 ವಿಶ್ವಕಪ್ 2026 ಫೈನಲ್: ನ್ಯೂಜಿಲೆಂಡ್ ಗೆ ಗೆಲ್ಲಲು ಭಾರತ 256 ರನ್ ಬೃಹತ್ ಗುರಿ!
ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಪೇರಿಸಿ ನ್ಯೂಜಿಲೆಂಡ್ ಗೆ ಗೆಲ್ಲಲು 256 ರನ್ ಗಳ ಬೃಹತ್ ಗುರಿ ನೀಡಿದೆ.

ಅಹ್ಮದಾಬಾದ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪ್ರಬಲ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತ 256 ರನ್ ಗಳ ಬೃಹತ್ ಗುರಿ ನೀಡಿದೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್-ಭಾರತ ನಡುವಿನ ಟಿ20 ವಿಶ್ವಕಪ್ 2026 ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಪೇರಿಸಿ ನ್ಯೂಜಿಲೆಂಡ್ ಗೆ ಗೆಲ್ಲಲು 256 ರನ್ ಗಳ ಬೃಹತ್ ಗುರಿ ನೀಡಿದೆ.
ಭಾರತದ ಪರ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 5 ಬೌಂಡರಿ ಸಹಿತ 89 ರನ್ ಪೇರಿಸಿದರೆ, ಅವರಿಗೆ ಅದ್ಭುತ ಸಾಥ್ ನೀಡಿದ ಅಭಿಷೇಕ್ ಶರ್ಮಾ ಕೂಡ 21 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 52 ರನ್ ಕಲೆಹಾಕಿದರು.
ಬಳಿಕ ಇಶಾನ್ ಕಿಶನ್ ಕೂಡ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮಾಡಿ 25 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 54 ರನ್ ಕಲೆಹಾಕಿ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದರು. ಉಳಿದಂತೆ ಹಾರ್ದಿಕ್ ಪಾಂಡ್ಯಾ 18 ರನ್ ಗಳಿಸಿ ಔಟಾದರು.
ಅಂತಿಮ ಹಂತದಲ್ಲಿ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್
ಹಾರ್ದಿಕ್ ಪಾಂಡ್ಯಾ ಔಟಾದ ಬಳಿಕ ಇನ್ನಿಂಗ್ಸ್ ನ ಅಂತಿಮ ಹಂತದಲ್ಲಿ ಕ್ರೀಸ್ ಗೆ ಬಂದ ಶಿವಂ ದುಬೆ ಕೂಡ ನ್ಯೂಜಿಲೆಂಡ್ ಬೌಲರ್ ಗಳ ಮೇಲೆ ಸವಾರಿ ಮಾಡಿದರು. ಒಂದು ಹಂತದಲ್ಲಿ ಭಾರತ ಸತತ ವಿಕೆಟ್ ಕಳೆದುಕೊಂಡು ರನ್ ರೇಟ್ ಕುಸಿದಿತ್ತು. ಭಾರತದ ಮೊತ್ತ 220 ಕೂಡ ದಾಟುವುದು ಕಷ್ಟವಾಗಿತ್ತು. ಈ ಹಂತದಲ್ಲಿ ಕ್ರೀಸ್ ಗೆ ಬಂದ ಶಿವಂ ದುಬೆ ಕೇವಲ 8 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿ ಸಿಡಿಸಿ ಅಜೇಯ 26 ರನ್ ಕಲೆಹಾಕಿ ಭಾರತದ ಮೊತ್ತ 250ರ ಗಡಿ ದಾಟುವಂತೆ ಮಾಡಿದರು.
ಜಿಮ್ಮಿ ನೀಶಂ ಅದ್ಭುತ ಬೌಲಿಂಗ್
ಇನ್ನು ಭಾರತದ ಬ್ಯಾಟಿಂಗ್ ಅಬ್ಬರದ ನಡುವೆಯೂ ನ್ಯೂಜಿಲೆಂಡ್ ನ ಜಿಮ್ಮಿ ನೀಶಂ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ನೀಶಂ ಒಂದೇ ಓವರ್ ನಲ್ಲಿ 2 ವಿಕೆಟ್ ಸೇರಿದಂತೆ ಒಟ್ಟು 3 ವಿಕೆಟ್ ಕಬಳಿಸಿದರು.
ಉಳಿದಂತೆ ಮ್ಯಾಟ್ ಹೆನ್ರಿ ಮತ್ತು ರಚಿನ್ ರವೀಂದ್ರ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



