IPL 2026: ವಿರಾಟ್ ಕೊಹ್ಲಿ ನೆಟ್‌ನಲ್ಲಿ ಕಠಿಣ ಅಭ್ಯಾಸ! Video ವೈರಲ್
ಇನ್‌ಸ್ಟಾಗ್ರಾಮ್‌ನಲ್ಲಿ ಕೊಹ್ಲಿ ಹಂಚಿಕೊಂಡಿರುವ ರೀಲ್ಸ್ ನಲ್ಲಿ 37 ವರ್ಷದ ಮಾಜಿ ಆರ್ ಸಿಬಿ ನಾಯಕ ನೆಟ್ ನಲ್ಲಿ ಅಭ್ಯಾಸ ನಡೆಸುತ್ತಿರುವುದು ಕಂಡುಬಂದಿದೆ.

ಸ್ಟಾರ್ ಇಂಡಿಯನ್ ಬ್ಯಾಟರ್ ವಿರಾಟ್ ಕೊಹ್ಲಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಸಿದ್ಧತೆಯನ್ನು ಪ್ರಾರಂಭಿಸಿದ್ದಾರೆ. ನೆಟ್‌ನಲ್ಲಿ ಅಭ್ಯಾಸ ಮಾಡುತ್ತಿರುವ ಕೊಹ್ಲಿ ವೀಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.
ಇನ್‌ಸ್ಟಾಗ್ರಾಮ್‌ನಲ್ಲಿ ಕೊಹ್ಲಿ ಹಂಚಿಕೊಂಡಿರುವ ರೀಲ್ಸ್ ನಲ್ಲಿ 37 ವರ್ಷದ ಮಾಜಿ ಆರ್ ಸಿಬಿ ನಾಯಕ ನೆಟ್ ನಲ್ಲಿ ಅಭ್ಯಾಸ ನಡೆಸುತ್ತಿರುವುದು ಕಂಡುಬಂದಿದೆ. ಐಪಿಎಲ್‌ನ ಹೊಸ ಸೀಸನ್ ಗೆ ಸಜ್ಜಾಗುತ್ತಿರುವಂತೆ ಬ್ಯಾಟಿಂಗ್ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದಾರೆ.
ಈ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಕೊಹ್ಲಿ ಫಿಟ್ ನೆಸ್ ಕಂಡು ಪುಳಕೀತರಾಗಿದ್ದಾರೆ. ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

2026 T20 ವಿಶ್ವಕಪ್ ಫೈನಲ್ ವೇಳೆ ಎಂಎಸ್ ಧೋನಿ, ರೋಹಿತ್ ಶರ್ಮಾ ಹಾಜರು; ವಿರಾಟ್ ಕೊಹ್ಲಿ ಗೈರಾಗಿದ್ದು ಏಕೆ?
ಐಪಿಎಲ್ ಇತಿಹಾಸದಲ್ಲಿ 267 ಪಂದ್ಯಗಳನ್ನಾಡಿರುವ ಕೊಹ್ಲಿ, 259 ಇನ್ನಿಂಗ್ಸ್‌ಗಳಲ್ಲಿ 8661 ರನ್ ಗಳಿಸಿದ್ದಾರೆ. 39.54 ಸರಾಸರಿಯಲ್ಲಿ 132.85 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಎಂಟು ಶತಕಗಳು ಮತ್ತು 63 ಅರ್ಧ ಶತಕಗಳನ್ನು ಸಿಡಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 54.75 ರ ಸರಾಸರಿಯಲ್ಲಿ 657 ರನ್ ಗಳಿಸಿದ ಕೊಹ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


