ಕ್ರಿಕೆಟ್

ಎರಡೆರಡು ಅತ್ಯಾಚಾರ ಆರೋಪ: ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವೇಗಿ ಯಶ್ ದಯಾಳ್ ಕಂಟೆಂಟ್ ಕ್ರಿಯೆಟರ್ ಶ್ವೇತಾ ಪುಂಡಿರ್ ರನ್ನು ಗುಟ್ಟಾಗಿ ಮದುವೆಯಾಗಿದ್ದಾರೆ. ಈ ಜೋಡಿ ಫೆಬ್ರವರಿ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಎರಡೆರಡು ಅತ್ಯಾಚಾರ ಆರೋಪ: ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!
ಯಶ್ ದಯಾಳ್-ಶ್ವೇತಾ ಪುಂಡಿರ್
Published On :

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವೇಗಿ ಯಶ್ ದಯಾಳ್ ಕಂಟೆಂಟ್ ಕ್ರಿಯೆಟರ್ ಶ್ವೇತಾ ಪುಂಡಿರ್ ರನ್ನು ಗುಟ್ಟಾಗಿ ಮದುವೆಯಾಗಿದ್ದಾರೆ. ಈ ಜೋಡಿ ಫೆಬ್ರವರಿ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಆದರೆ ಕ್ರಿಕೆಟ್ ಜಗತ್ತಿನಿಂದ ಯಾರೂ ಮದುವೆಗೆ ಹಾಜರಾಗಿರಲಿಲ್ಲ ಎಂದು ವರದಿಯಾಗಿದೆ.

ಶ್ವೇತಾ ಪುಂಡಿರ್ ದೆಹಲಿ ಮೂಲದ ಸಾಮಾಜಿಕ ಮಾಧ್ಯಮ ಪ್ರಭಾವಿ ಮತ್ತು ವ್ಲಾಗರ್. ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 5.87 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಶ್ವೇತಾ ಇಂಟರ್‌ಕಾಂಟಿನೆಂಟಲ್ ಲೆಜೆಂಡ್ಸ್ ಲೀಗ್‌ನ ಪ್ರಸಾರಕರಾಗಿಯೂ ಕೆಲಸ ಮಾಡಿದ್ದರು. 2025ರಲ್ಲಿ ಯಶ್ ದಯಾಳ್ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು. ಗಾಜಿಯಾಬಾದ್‌ನ ಮಹಿಳೆಯೊಬ್ಬರು ದಯಾಳ್ ವಿರುದ್ಧ ಮದುವೆಯ ನೆಪದಲ್ಲಿ ದೈಹಿಕವಾಗಿ ಬಳಸಿಕೊಂಡ ಆರೋಪ ಮಾಡಿದ್ದರೇ, ಜೈಪುರದ ಅಪ್ರಾಪ್ತೆಯೊಬ್ಬಳು ಅತ್ಯಾಚಾರದ ಆರೋಪ ಹೊರಿಸಿದ್ದಾಳೆ.

ಯಶ್ ದಯಾಳ್ ಪ್ರಸ್ತುತ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಗಾಜಿಯಾಬಾದ್‌ನ ಮಹಿಳೆಯೊಬ್ಬರು ಮದುವೆಯ ಸುಳ್ಳು ಭರವಸೆ ನೀಡಿ ದಯಾಳ್ ಐದು ವರ್ಷಗಳ ಕಾಲ ತನ್ನ ಮೇಲೆ ಭಾವನಾತ್ಮಕವಾಗಿ ಮತ್ತು ದೈಹಿಕವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನ ನಂತರ, ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಜೈಪುರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ದಯಾಳ್ ಮೇಲಿದೆ. ಕ್ರಿಕೆಟ್‌ನಲ್ಲಿ ಸಹಾಯ ಮಾಡುವ ಭರವಸೆ ನೀಡಿ ದಯಾಳ್ 2023ರಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ. ಕಳೆದ ಜನವರಿಯಲ್ಲಿ ರಾಜಸ್ಥಾನ ಹೈಕೋರ್ಟ್ ಈ ಪ್ರಕರಣದಲ್ಲಿ ದಯಾಳ್‌ಗೆ ಮಧ್ಯಂತರ ಜಾಮೀನು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.