IPL 2026, RCB vs SRH: ಕಿಂಗ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಉದ್ಘಾಟನಾ ಪಂದ್ಯ ಗೆದ್ದು ಬೀಗಿದ ಬೆಂಗಳೂರು
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.
ಹೈದರಾಬಾದ್ ಪರ ಇಶಾನ್ ಕಿಶನ್ ಸ್ಫೋಟಕ 80 ರನ್ಗಳ ಇನ್ನಿಂಗ್ಸ್ ಆಡಿದರೆ, ಆರ್‌ಸಿಬಿ ಪರ ಡಫಿ ಪ್ರಮುಖ 3 ವಿಕೆಟ್ ಪಡೆದರು.
ಗೆಲುವಿಗೆ 202 ರನ್ ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರು ಪವರ್‌ಪ್ಲೇನಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ನಾಲ್ಕು ಓವರ್‌ಗಳಲ್ಲಿ ಇಬ್ಬರು ಸೇರಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.
ವಿರಾಟ್ ಕೊಹ್ಲಿಯ ಭರ್ಜರಿ ಅರ್ಧ ಶತಕ(69)ದ ನೆರವಿನಿಂದ ಕೇವಲ 15.4 ಓವರ್ ಗಳಲ್ಲಿ 203ರನ್ ಗಳಿಸುವ ಮೂಲಕ ಆರ್ ಸಿಬಿ ಆರು ವಿಕೆಟ್ ಗಳ ಗೆಲುವು ಸಾಧಿಸಿತು.
ಪಂದ್ಯಕ್ಕೂ ಮುನ್ನ ಮೌನಾಚರಣೆ
ಕಳೆದ ವರ್ಷ ಆರ್‌ಸಿಬಿ ತಂಡದ ವಿಜಯೋತ್ಸವದ ಮೆರವಣಿಗೆಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರ ಸ್ಮರಣಾರ್ಥ ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



