IPL 2026: ಮುಂಬೈ ಇಂಡಿಯನ್ಸ್ ಮತ್ತೊಂದು ವಿಶ್ವ ದಾಖಲೆ!
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿತು. ಈ ಮೂಲಕ T20 ಕ್ರಿಕೆಟ್‌ನಲ್ಲಿ ಎಲೈಟ್ ಗುಂಪು ಸೇರಿತು.

ಮುಂಬೈ: ಐಪಿಎಲ್ ನ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ (MI) 300 ಪಂದ್ಯಗಳಲ್ಲಿ ಆಡಿದ ಮೊದಲ T20 ಫ್ರಾಂಚೈಸಿ ಎಂಬ ವಿಶ್ವ ದಾಖಲೆಯನ್ನು ಬರೆದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿತು. ಈ ಮೂಲಕ T20 ಕ್ರಿಕೆಟ್‌ನಲ್ಲಿ ಎಲೈಟ್ ಗುಂಪು ಸೇರಿತು.
ಒಟ್ಟಾರೆಯಾಗಿ 300 ಪಂದ್ಯಗಳನ್ನು ಆಡಿದ ಮೂರನೇ ತಂಡವಾಯಿತು. ಈ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಸೋಮರ್‌ಸೆಟ್ ಕೌಂಟಿ ಕ್ರಿಕೆಟ್ ಕ್ಲಬ್ 303 ಪಂದ್ಯಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಪಾಕಿಸ್ತಾನ ನಂತರದ ಸ್ಥಾನದಲ್ಲಿದೆ. ಇತ್ತೀಚಿಗೆ ನಡೆದ ICC ಪುರುಷರ T20 ವಿಶ್ವಕಪ್‌ನಲ್ಲಿ ಈ ಸಾಧನೆ ಮಾಡಿತು.
ಐಪಿಎಲ್ ಫ್ರಾಂಚೈಸಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 287 ಪಂದ್ಯಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಶೀಘ್ರದಲ್ಲೇ ಈ ರೆಕಾರ್ಡ್ ಮುರಿಯುವ ಸಾಧ್ಯತೆಯಿದೆ.
ಮುಂಬೈನ ಟಿ-20 ಪಂದ್ಯಗಳಲ್ಲಿ ಐಪಿಎಲ್ ಹಾಗೂ ಈಗ ನಿಷ್ಟ್ರಿಯಗೊಂಡಿರುವ ಚಾಂಪಿಯನ್ಸ್ ಲೀಗ್ ಟಿ-20 ಪಂದ್ಯಗಳು ಸೇರಿವೆ. ಇಲ್ಲಿ ಮುಂಬೈ ಇಂಡಿಯನ್ಸ್ 22 ಪಂದ್ಯಗಳನ್ನು ಆಡಿದ್ದು, 11 ಪಂದ್ಯಗಳಲ್ಲಿ ಗೆದಿದ್ದೆ. ಒಂಬತ್ತು ಪಂದ್ಯಗಳಲ್ಲಿ ಸೋತಿದೆ. ಆದಾಗ್ಯೂ, ಐಪಿಎಲ್ ನಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡವು 2013, 2015, 2017, 2019 ಮತ್ತು 2020 ರಲ್ಲಿ ಐದು ಬಾರಿಗೆ ಪ್ರಶಸ್ತಿಗಳನ್ನು ಗೆದ್ದಿದೆ. ಒಟ್ಟು IPL ಪಂದ್ಯಗಳಲ್ಲಿ 151 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ದಾಖಲಿಸಿದ್ದು, 122 ಪಂದ್ಯಗಳಲ್ಲಿ ಸೋತಿದೆ. ಒಟ್ಟಾರೇ ಇತರ ತಂಡಗಳಿಗಿಂತ ಹೆಚ್ಚಿನ ಪಂದ್ಯಗಳಲ್ಲಿ ಆಡಿರುವ ತಂಡವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



