'ನಿರಾಸೆಗೊಳಿಸಿದ್ದಕ್ಕೆ ಕ್ಷಮಿಸಿ': ಒಂದು ಬಾರಿಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದಿಲ್ಲ ಎಂದ ಅಭಿಮಾನಿಗೆ RCB ಮಾಜಿ ಆಟಗಾರ ತಿರುಗೇಟು!
ಐಪಿಎಲ್‌ನಲ್ಲಿ ಪಾರ್ಥಿವ್, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಈಗ ಸ್ಥಗಿತಗೊಂಡಿರುವ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಡೆಕ್ಕನ್ ಚಾರ್ಜರ್ಸ್ ಸೇರಿದಂತೆ ಹಲವಾರು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದಾರೆ.
ತಮ್ಮ ಐಪಿಎಲ್ ದಾಖಲೆ ಬಗ್ಗೆ ತಪ್ಪು ಮಾಹಿತಿಯನ್ನು ಹಂಚಿಕೊಂಡ ಅಭಿಮಾನಿಯೊಬ್ಬರಿಗೆ ಸಾಮಾಜಿಕ ಮಾಧ್ಯಮದಲ್ಲಿಯೇ ಸಾಕ್ಷಿ ಸಮೇತ ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ಪಾರ್ಥಿವ್ ಪಟೇಲ್ ತಿರುಗೇಟು ನೀಡಿದ್ದಾರೆ. 2003ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಾರ್ಥಿವ್, ಭಾರತದ ಪರ 25 ಟೆಸ್ಟ್, 38 ಏಕದಿನ ಮತ್ತು ಎರಡು ಟಿ20ಐಗಳಲ್ಲಿ ಆಡಿದ್ದಾರೆ. ಎಲ್ಲ ಸ್ವರೂಪಗಳಲ್ಲಿ 1,706 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ, ಅವರು 139 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದು, 2,848 ರನ್ ಗಳಿಸಿದ್ದಾರೆ. ಪಾರ್ಥಿವ್ ಈಗ ತಮ್ಮ ಕಾಮೆಂಟರಿ ಮತ್ತು ಕ್ರಿಕೆಟ್ ವಿಶ್ಲೇಷಣೆಗಾಗಿ ಗುರುತಿಸಲ್ಪಟ್ಟಿದ್ದರೂ, ಎಕ್ಸ್‌ನಲ್ಲಿ ಬಳಕೆದಾರರೊಬ್ಬರು 41 ವರ್ಷದ ಆಟಗಾರ, ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎಂದಿಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ ಎಂದಿದ್ದರು.
13 ಐಪಿಎಲ್ ಸೀಸನ್‌ಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆಲ್ಲದ ಆಟಗಾರ ಯಾರೆಂದು ತಿಳಿಸಿ ಎಂದು ಅಭಿಮಾನಿಗಳಿಗೆ ಕೇಳಲಾದ ಪೋಸ್ಟ್‌ವೊಂದಕ್ಕೆ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿ, ಪಾರ್ಥಿವ್ ಪಟೇಲ್ ಅವರನ್ನು ಟ್ಯಾಗ್ ಮಾಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಆಟಗಾರ ತಮ್ಮ ಅಂಕಿಅಂಶಗಳ ಸ್ಕ್ರೀನ್‌ಶಾಟ್‌ನೊಂದಿಗೆ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ. ನಿಮ್ಮನ್ನು 'ನಿರಾಶೆಗೊಳಿಸಿದ್ದಕ್ಕೆ ಕ್ಷಮಿಸಿ!!' ಎಂಬ ಶೀರ್ಷಿಕೆ ನೀಡಿದ್ದಾರೆ.
ಐಪಿಎಲ್‌ನಲ್ಲಿ ಪಾರ್ಥಿವ್, ಚೆನ್ನೈ ಸೂಪರ್ ಕಿಂಗ್ಸ್ (CSK), ಮುಂಬೈ ಇಂಡಿಯನ್ಸ್ (MI), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಈಗ ಸ್ಥಗಿತಗೊಂಡಿರುವ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಡೆಕ್ಕನ್ ಚಾರ್ಜರ್ಸ್ ಸೇರಿದಂತೆ ಹಲವಾರು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದಾರೆ. ಪಾರ್ಥಿವ್ ಪಟೇಲ್ ಅವರು ಐದು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗಳಿಸಿದ್ದಾರೆ.
ಸದ್ಯ, ಪಾರ್ಥಿವ್ ಐಪಿಎಲ್ 2026ನೇ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಶುಭಮನ್ ಗಿಲ್ ನಾಯಕತ್ವದಲ್ಲಿ, ಜಿಟಿ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವು ಸಾಧಿಸಿದೆ.
ಗುಜರಾತ್ ಟೈಟಾನ್ಸ್ ತಂಡವು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


