IPL 2026: ಲಕ್ನೋ ವಿರುದ್ಧ 6 ವಿಕೆಟ್ ಗಳಿಂದ ಗೆದ್ದ ಮುಂಬೈ ಇಂಡಿಯನ್ಸ್!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ಗಳಿಸಿತು. ಆರಂಭಿಕ ಆಟಗಾರರಾದ ಮಿಚೆಲ್ ಮಾರ್ಷ್ 44, ಜೋಸ್ ಇಂಗ್ಲೀಷ್ 13, ನಿಕೋಲಾಸ್ ಪೋರಾನ್ 63 ರನ್ ಗಳಿಸಿದರು.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ ನ 47ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಈ ಬಾರಿಯ ಟೂರ್ನಿಯಲ್ಲಿ ಕಳಪೆ ಪ್ರದರ್ಶನದಿಂದ ಟೀಕೆಗಳಿಗೆ ಗುರಿಯಾಗಿರುವ ಮುಂಬೈ ಇಂಡಿಯನ್ಸ್ ಇಂದು ತವರಿನಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿತು. ಈ ಮೂಲಕ ತವರಿನ ಅಭಿಮಾನಿಗಳಿಗೆ ಸ್ವಲ್ಪ ಖುಷಿ ನೀಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ಗಳಿಸಿತು. ಆರಂಭಿಕ ಆಟಗಾರರಾದ ಮಿಚೆಲ್ ಮಾರ್ಷ್ 44, ಜೋಸ್ ಇಂಗ್ಲೀಷ್ 13, ನಿಕೋಲಾಸ್ ಪೋರಾನ್ 63 ರನ್ ಗಳಿಸಿದರು.
ಆದರೆ ನಾಯಕ ರಿಷಭ್ ಪಂತ್ 15 ರನ್ ಗಳಿಸಿದಾಗ ಜಾಕ್ಸ್ ಬೌಲಿಂಗ್ ನಲ್ಲಿ ರಿಕೆಲ್ಟನ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಉಳಿದಂತೆ ಏಡೆನ್ ಮಕ್ರಂ 31 ರನ್ ಗಳಿಸಿದರೆ, ಅಕ್ಷತ್ ರಘುವಂಶಿ 11, ಹಿಮಂತ್ ಸಿಂಗ್ 40 ರನ್ ಗಳಿಸಿದರು.
ಮುಂಬೈ ಇಂಡಿಯನ್ಸ್ ಪರ ಕಾರ್ಬಿನ್ ಬಾಸ್ 2, ಎಎಂ ಗಜಾನ್ ಫರ್, ವಿಲ್ ಜಾಕ್ಸ್, ರಘು ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು. ಲಕ್ನೋ ನೀಡಿದ 229 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ಪರ ರಿಯನ್ ರಿಕೆಲ್ಟಾನ್ 83, ರೋಹಿತ್ ಶರ್ಮಾ 84 ರನ್ ಗಳಿಸುವ ಮೂಲಕ ಕಂಬ್ಯಾಕ್ ಮಾಡಿದರು.
ತಿಲಕ್ ವರ್ಮಾ 11, ಸೂರ್ಯ ಕುಮಾರ್ ಯಾದವ್ 12 ರನ್ ಗಳಿಸಿದರು. ಉಳಿದಂತೆ ನಮಾನ್ ದಿರ್ 23, ವಿಲ್ ಜಾಕ್ಸ್ 10 ರನ್ ಗಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ 18.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿ ಭರ್ಜರಿ ಗೆಲುವು ದಾಖಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


