IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುತ್ತಲೇ ಅಸಭ್ಯ ವರ್ತನೆ ತೋರಿದ ಸ್ಟಾರ್ ಬ್ಯಾಟರ್ Tim David; ಬಿಸಿಸಿಐ ಕೆಂಗಣ್ಣು!
ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರಿಕೆಟ್ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿತ್ತು.

ರಾಯ್ಪುರ: ಐಪಿಎಲ್ ಟೂರ್ನಿಯ ನಿನ್ನೆ ರಣರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಣಿಸುತ್ತಲೇ ತಂಡದ ಸ್ಟಾರ್ ಆಟಗಾರ ಟಿಮ್ ಡೇವಿಡ್ ಅಸಭ್ಯ ವರ್ತನೆ ತೋರಿದ್ದಾರೆ.
ನಿನ್ನೆ ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರಿಕೆಟ್ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿತ್ತು.
ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಆರ್ ಸಿಬಿ ಕೂಡ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ ಕೇವಲ 2 ವಿಕೆಟ್ ಅಂತರದ ವಿರೋಚಿತ ಗೆಲುವು ಸಾಧಿಸಿತು.
ಅಂತಿಮ ಎಸೆತದಲ್ಲಿ ಗೆಲ್ಲಲು 2 ರನ್ ಬೇಕಿದ್ದಾಗ ಭುವನೇಶ್ವರ್ ಕುಮಾರ್ ಮತ್ತು ರಸಿಕ್ ದರ್ 2 ರನ್ ಓಡಿ ಆರ್ ಸಿಬಿಗೆ 2 ವಿಕೆಟ್ ಗಳ ರೋಚಕ ಜಯ ತಂದಿತ್ತರು.
ಟಿಮ್ ಡೇವಿಡ್ ಅಸಭ್ಯ ವರ್ತನೆ
ಇತ್ತ ಆರ್ ಸಿಬಿ ಗೆಲುವು ಸಾಧಿಸುತ್ತಲೇ ಅತ್ತ ತಂಡದ ಡಗೌಟ್ ನಲ್ಲಿದ್ದ ಸ್ಟಾರ್ ಬ್ಯಾಟರ್ ಟಿಮ್ ಡೇವಿಡ್ ಅಸಭ್ಯ ವರ್ತನೆ ತೋರಿದ್ದಾರೆ.
ಅಂತಿಮ ಎಸೆತದಲ್ಲಿ ಗೆಲುವಿನ ರನ್ ಬರುತ್ತಲೇ ಡಗೌಟ್ ನಲ್ಲಿ ಕುಳಿತಿದ್ದ ಟಿಮ್ ಡೇವಿಡ್ ಎದ್ದು ನಿಂತು ಮುಂಬೈ ಇಂಡಿಯನ್ಸ್ ಆಟಗಾರರಿಗೆ ತಮ್ಮ ಕೈಗಳ ಮಧ್ಯದ ಬೆರಳು ತೋರಿ ಅಸಭ್ಯವರ್ತನೆ ಮೆರೆದಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಟಿಮ್ ಡೇವಿಡ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆ ಕ್ರಿಕೆಟ್ ಅಭಿಮಾನಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟಿಸಿದ್ದು, ಕೆಲವರು ಪಂದ್ಯದಲ್ಲಿನ ಉತ್ಸಾಹ ಮತ್ತು ಒತ್ತಡದಿಂದ ಈ ರೀತಿಯ ಪ್ರತಿಕ್ರಿಯೆ ಬಂದಿರಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಕ್ರೀಡಾಸ್ಫೂರ್ತಿಗೆ ವಿರುದ್ಧವಾದ ವರ್ತನೆ ಎಂದು ಟೀಕಿಸಿದ್ದಾರೆ.
ಅಂತೆಯೇ ಈ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಬಿಸಿಸಿಗೆ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ಈ ವಿಷಯದ ಕುರಿತು ಇನ್ನೂ ಅಧಿಕೃತ ಪ್ರತಿಕ್ರಿಯೆ ಅಥವಾ ಶಿಸ್ತು ಕ್ರಮದ ಬಗ್ಗೆ ಪ್ರಕಟಣೆ ಹೊರಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



