IPL 2026 Playoffs Scenarios: ಅಗ್ರಸ್ಥಾನದಲ್ಲಿ RCB; 4ನೇ ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ!
ಇನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಿಂದ 18 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಗುಜರಾತ್ ಟೈಟಾನ್ಸ್ 13 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ರೋಚಕತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಮವಾರ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ಗೆ ಲಗ್ಗೆ ಇಟ್ಟಿತು.
ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ 13 ಪಂದ್ಯಗಳಿಂದ 16 ಪಾಯಿಂಟ್ ಪಡೆದಿದ್ದು, ಪ್ಲೇ ಆಫ್ ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿತು. ಇನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಿಂದ 18 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಗುಜರಾತ್ ಟೈಟಾನ್ಸ್ 13 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಈ ಮೂರು ತಂಡಗಳು ಪ್ಲೇ ಆಫ್ ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದ್ದು, ಉಳಿದ ನಂಬರ್ 4 ಸ್ಥಾನಕ್ಕಾಗಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಎದುರಾಗಿದೆ.
ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್ ರೇಸ್‌ನಿಂದ ಹೊರಗಿವೆ. ಅವರನ್ನು ಹೊರತುಪಡಿಸಿ, ಇತರ ಎಲ್ಲಾ ತಂಡಗಳು ಪ್ಲೇ ಆಫ್ ಪ್ರವೇಶಿಸಲು ಇನ್ನೂ ಅವಕಾಶವಿದೆ. ಪಂಜಾಬ್ ಕಿಂಗ್ಸ್ 13 ಪಂದ್ಯಗಳಿಂದ 13 ಅಂಕಗಳು, ಚೆನ್ನೈ ಸೂಪರ್ ಕಿಂಗ್ಸ್ 13 ಪಂದ್ಯಗಳಿಂದ 12 ಅಂಕಗಳು ಮತ್ತು ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳಿಂದ 12 ಅಂಕಗಳನ್ನು ಪಡೆದಿದ್ದು, ತಲಾ ಒಂದು ಪಂದ್ಯ ಮಾತ್ರ ಬಾಕಿ ಉಳಿದಿವೆ. ಅವರು ಆ ಪಂದ್ಯಗಳನ್ನು ಗೆದ್ದು ಇತರ ಫಲಿತಾಂಶಗಳನ್ನು ನಿರೀಕ್ಷಿಸಬೇಕು.

ರಾಜಸ್ಥಾನ ರಾಯಲ್ಸ್ 12 ಪಂದ್ಯಗಳಿಂದ 12 ಅಂಕಗಳು ಪಡೆದಿದ್ದು, ಅಗ್ರ ಮೂರು ತಂಡಗಳನ್ನು ಹೊರತುಪಡಿಸಿ 16 ಅಂಕಗಳನ್ನು ತಲುಪಬಹುದಾದ ಏಕೈಕ ತಂಡವಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್ 12 ಪಂದ್ಯಗಳಿಂದ 11 ಪಾಯಿಂಟ್ ಪಡೆದಿದ್ದು, ಎರಡು ಪಂದ್ಯಗಳು ಉಳಿದಿವೆ. ಆದರೆ ಅವರು ಪಡೆಯಬಹುದಾದ ಗರಿಷ್ಠ ಅಂಕಗಳು 15 ಅಂಕ ಮಾತ್ರವಾಗಲಿದೆ.

IPL 2026: ಕೊನೆಗೂ ಚೆಪಾಕ್ ಮೈದಾನದಲ್ಲಿ ಕಾಣಿಸಿಕೊಂಡ ಧೋನಿ! ಅಭಿಮಾನಿಗಳೊಂದಿಗೆ ಸೆಲ್ಫಿ; ವಿದಾಯದ ಸೂಚನೆಯೇ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


