IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video
'ವಿಸಿಲ್ ಪೋಡು' ಎನ್ನುವುದು ತಮಿಳಿನ ಪ್ರಸಿದ್ಧ ಘೋಷಣೆಯಾಗಿದೆ. ಇದು ವಿಶೇಷವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಅಭಿಮಾನಿಗಳ ಅಚ್ಚುಮೆಚ್ಚಿನ ಜೈಕಾರವಾಗಿದೆ.

ಚೆನ್ನೈ: ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ ಬಳಿಕ ಸನ್‌ರೈಸರ್ಸ್ ಹೈದರಾಬಾದ್‌ನ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಇಶಾನ್ ಕಿಶನ್ 'ವಿಸಿಲ್ ಪೋಡು' ಮೂಲಕ ಸಂಭ್ರಮಿಸಿದ್ದಾರೆ.
'ವಿಸಿಲ್ ಪೋಡು' ಎನ್ನುವುದು ತಮಿಳಿನ ಪ್ರಸಿದ್ಧ ಘೋಷಣೆಯಾಗಿದೆ. ಇದು ವಿಶೇಷವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಅಭಿಮಾನಿಗಳ ಅಚ್ಚುಮೆಚ್ಚಿನ ಜೈಕಾರವಾಗಿದೆ.
ಜೊತೆಗೆ, ಇದು ತಲಪತಿ ವಿಜಯ್ ಅಭಿನಯದ 'ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್' (GOAT) ಸಿನಿಮಾದ ಸೂಪರ್ ಹಿಟ್ ಹಾಡಿನ ಶೀರ್ಷಿಕೆಯೂ ಆಗಿದೆ.
ಚೆನ್ನೈ ನೀಡಿದ್ದ 181 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 19 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿ 5 ವಿಕೆಟ್ ಅಂತರದ ಗೆಲುವು ಸಾಧಿಸಿತು. ನಿನ್ನೆಯ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತಿತ್ತು. ಆದರೆ ಇಂದಿನ ಪಂದ್ಯದಲ್ಲೂ ಚೆನ್ನೈ ತಂಡ ಸೋತಿದೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ಪಡೆ ಪ್ಲೇಆಫ್ ರೇಸ್ ನಿಂದ ಬಹುತೇಕ ಹೊರಬಿದ್ದಿದೆ. ಇಂದಿನ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ಲೇಆಫ್ ಹಂತಕ್ಕೇರಿದೆ.
ಹೈದರಾಬಾದ್ ಮಾತ್ರವಲ್ಲದೇ ಗುಜರಾತ್ ಟೈಟನ್ಸ್ ಕೂಡ ಪ್ಲೇ ಆಫ್ ಗೇರಿದೆ. ಬಳಿಕ ಇಶಾನ್ ಕಿಶನ್, ವಿಸಿಲ್ ಪೋಡು' ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳನ್ನು ಕೆಣಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

IPL 2026: ಸ್ಟಂಪೌಟ್ ಮಾಡಿದ Sanju Samson ವಿರುದ್ಧ Klaasen ಆಕ್ರೋಶ; ಮೈದಾನದಲ್ಲೇ ಹೈಡ್ರಾಮಾ; ಆಗಿದ್ದೇನು?
ಇಶಾನ್ ಕಿಶನ್ 47 ಎಸೆತಗಳಲ್ಲಿ 70 ರನ್ ಗಳ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಅನ್ನು 5 ವಿಕೆಟ್‌ಗಳಿಂದ ಸೋಲಿಸಿ ಟಾಪ್ 4 ರಲ್ಲಿ ಸ್ಥಾನ ಪಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


