ಲಂಕಾ ವಿರುದ್ಧ ಏಕದಿನ, ಟೆಸ್ಟ್ ತಂಡ ಪ್ರಕಟ: ರಿಷಭ್ ಪಂತ್‌ಗೆ ಕೊಕ್; ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕ
ಟೆಸ್ಟ್ ತಂಡದ ಉಪನಾಯಕ ಸ್ಥಾನದಿಂದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ.
ಏಕದಿನ ಹಾಗೂ ಟೆಸ್ಟ್ ಎರಡೂ ತಂಡಗಳ ನಾಯಕನಾಗಿ ಶುಭ್ಮನ್ ಗಿಲ್ ಮುಂದುವರೆದರೆ, ಟೆಸ್ಟ್ ತಂಡದ ಉಪನಾಯಕನಾಗಿ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.
ಟೆಸ್ಟ್ ತಂಡದ ಉಪನಾಯಕ ಸ್ಥಾನದಿಂದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.
ಏಕದಿನ ತಂಡದಲ್ಲಿ ಹೊಸಮುಖವಾಗಿ ಮೂವರು ಆಟಗಾರರು ಕಾಣಿಸಿಕೊಂಡಿದ್ದು, ಟೆಸ್ಟ್ ತಂಡದಲ್ಲಿ ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
ಟೆಸ್ಟ್ ತಂಡದಲ್ಲಿ ಹೊಸ ಮುಖಗಳು
ಮಾನವ್ ಸುತಾರ್ (ಸ್ಪಿನ್ನರ್)
ಗುರ್ನೂರ್ ಬ್ರಾರ್ (ವೇಗದ ಬೌಲರ್).
ಏಕದಿನ ತಂಡದಲ್ಲಿ ಹೊಸ ಮುಖಗಳು
ಗುರ್ನೂರ್ ಬ್ರಾರ್ (ವೇಗದ ಬೌಲರ್)
ಪ್ರಿನ್ಸ್ ಯಾದವ್ (ವೇಗದ ಬೌಲರ್)
ಹರ್ಷ್ ದುಬೆ (ಸ್ಪಿನ್ನರ್)
ಟೆಸ್ಟ್ ತಂಡ
ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.
ಏಕದಿನ ತಂಡ
ಶುಭ್ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



