IPL 2026: LSG vs PBKS ಪಂದ್ಯ; ಚಿಯರ್‌ಲೀಡರ್‌ಗಳೊಂದಿಗೆ ಅಭಿಮಾನಿಗಳ ಅನುಚಿತ ವರ್ತನೆ; ಕ್ರಮ ಕೈಗೊಂಡ ಪೊಲೀಸರು!
ಪಂದ್ಯದ ಸಮಯದಲ್ಲಿ ಕೆಲವು ಅಭಿಮಾನಿಗಳು ಚಿಯರ್‌ಲೀಡರ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.
ಶನಿವಾರ ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಸೋಲಿಸುವ ಮೂಲಕ ಪಂಜಾಬ್ ಕಿಂಗ್ಸ್ (PBKS) ತಂಡವು ಐಪಿಎಲ್ 2026ರ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಶ್ರೇಯಸ್ ಅಯ್ಯರ್ ಅದ್ಭುತ ಶತಕ ಬಾರಿಸಿ ತಮ್ಮ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದರೆ, ಎಲ್‌ಎಸ್‌ಜಿ ತಂಡವು ಈ ಆವೃತ್ತಿಯ 10ನೇ ಸೋಲನ್ನು ಅನುಭವಿಸಿತು. ಆದಾಗ್ಯೂ, ಚಿಯರ್‌ಲೀಡರ್‌ಗಳ ಜೊತೆಗೆ ಅಭಿಮಾನಿಗಳು ಅಸಭ್ಯವಾಗಿ ವರ್ತಿಸಿರುವ ಘಟನೆ ವರದಿಯಾಗಿದೆ.
ಪಂದ್ಯದ ಸಮಯದಲ್ಲಿ ಕೆಲವು ಅಭಿಮಾನಿಗಳು ಚಿಯರ್‌ಲೀಡರ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಸ್ಥಳದ ದೃಶ್ಯಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ತ್ವರಿತವಾಗಿ ಮಧ್ಯಪ್ರವೇಶಿಸಿ ಅಭಿಮಾನಿಗಳ ಗುಂಪಿನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿ ಅಭಿಮಾನಿಗಳೊಂದಿಗೆ ಮಾತನಾಡುತ್ತಿರುವುದೂ ಕಂಡುಬಂದಿದೆ.
ಪಂದ್ಯದ ಬಗ್ಗೆ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಶನಿವಾರ ರಾತ್ರಿ ನಡೆದ ಗುಂಪು ಹಂತದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಏಳು ವಿಕೆಟ್‌ಗಳ ಸೋಲು ಕಂಡಿದೆ. ನಮ್ಮ ತಂಡವು ಐಪಿಎಲ್ 2026ರ ಆವೃತ್ತಿಯಲ್ಲಿ ಸವಾಲನ್ನು ಎದುರಿಸಿದೆ ಎಂದರು.
'ಇದು ಕಠಿಣವಾಗಿದೆ. ನಾವು ಧೈರ್ಯದಿಂದ ಮುಂದುವರಿಯಬೇಕು. ನಮ್ಮ ತಲೆಯನ್ನು ಮೇಲಕ್ಕೆತ್ತಬೇಕು, ಇದು ಬಹಳಷ್ಟು ಕಲಿಯುವ ಸಮಯ, ಖಂಡಿತವಾಗಿಯೂ ನಮಗೆ ಕಠಿಣ ಆವೃತ್ತಿ ಇದಾಗಿತ್ತು ಎಂದು ಪಂತ್ ಹೇಳಿದರು.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು.
197 ರನ್ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಪ್ರಿಯಾಂಶ್ ಆರ್ಯ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ಪ್ರಭ್ಸಿಮ್ರನ್ ಸಿಂಗ್ 69 ಮತ್ತು ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 18 ಓವರ್‌ಗಳಲ್ಲಿಯೇ ಗೆಲುವಿನ ದಡ ಸೇರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


