ಕ್ರಿಕೆಟ್

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್; GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್; GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB
ಕೊಹ್ಲಿ ರಜತ್ ಪಾಟಿದಾರ್ ಬ್ಯಾಟಿಂಗ್
Published On :

ಧರ್ಮಶಾಲಾ: ಐಪಿಎಲ್ ಟೂರ್ನಿಯ ಇಂದಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತ ಪೇರಿಸಿದ್ದು, ಗುಜರಾತ್ ಟೈಟನ್ಸ್ ಗೆ ಅಗ್ನಿ ಪರೀಕ್ಷೆ ಎದುರಾಗಿದೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಅದರಂತೆ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ವಿರಾಟ್ ಕೊಹ್ಲಿ (43), ರಜತ್ ಪಟಿದಾರ್ (ಅಜೇಯ 93), ಕೃನಾಲ್ ಪಾಂಡ್ಯಾ ಮತ್ತು ದೇವದತ್ ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 254 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ 7 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 19 ರನ್ ಗಳಿಸಿದರೆ, ಮತ್ತೊಂದು ತುದಿಯಲ್ಲಿದ್ದ ವಿರಾಟ್ ಕೊಹ್ಲಿ 1 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರು.

ಆ ಮೂಲಕ ಕೇವಲ 7 ರನ್ ಗಳ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು. ಕೊಹ್ಲಿ-ವೆಂಕಟೇಶ್ ಅಯ್ಯರ್ ವಿಕೆಟ್ ಪತನದ ಬಳಿಕ ಕ್ರೀಸ್ ಗೆ ಬಂದ ದೇವದತ್ ಪಡಿಕ್ಕಲ್ 19 ಎಸೆತಗಳಲ್ಲಿ 5 ಬೌಂಡರಿ ಸಹಿತ 30 ರನ್ ಗಳಿಸಿ ಹೋಲ್ಡರ್ ಗೆ ವಿಕೆಟ್ ಒಪ್ಪಿಸಿದರು.

ಬಳಿಕ ಜೊತೆಗೂಡಿದ ಕೃನಾಲ್ ಪಾಂಡ್ಯಾ (43) ಮತ್ತು ನಾಯಕ ರಜತ್ ಪಾಟಿದಾರ್ (93) ಮಧ್ಯಮ ಕ್ರಮಾಂಕದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೃನಾಲ್ ಪಾಂಡ್ಯಾ 28 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 5 ಬೌಂಡರಿ ಸಹಿತ 43 ರನ್ ಪೇರಿಸಿ ರಬಾಡಾ ಬೌಲಿಂಗ್ ನಲ್ಲಿ ಔಟಾದರು. ಬಳಿಕ ಬಂದ ಟಿಮ್ ಡೇವಿಡ್ 4 ಗಳಿಸಿ ಔಟಾದರು.

ಅಂತಿಮವಾಗಿ ಆರ್ ಸಿಬಿ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿದ್ದು, ಗುಜರಾತ್ ಗೆ ಗೆಲ್ಲಲು 255 ರನ್ ಗಳ ಬೃಹತ್ ಗುರಿ ನೀಡಿದೆ.

ಇನ್ನು ಗುಜರಾತ್ ಪರ ಜೇಸನ್ ಹೋಲ್ಡರ್ ಮತ್ತು ಕಾಗಿಸೋ ರಬಾಡಾ ತಲಾ 2 ವಿಕೆಟ್ ಪಡೆದರೆ, ಕನ್ನಡಿಗ ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.