Women's T20 World Cup 2026: ಭಾರತ ತಂಡ ಪ್ರಕಟ; ಹರ್ಮನ್ಪ್ರೀತ್ ಕೌರ್ ನಾಯಕಿ; ಪ್ರಮುಖ ಆಟಗಾರ್ತಿಯರು ಔಟ್!
ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್, ಗಾಯಗೊಂಡಿರುವ ಅಮನ್ಜೋತ್ ಕೌರ್ ಬದಲಿಗೆ ಮಧ್ಯಮ ಕ್ರಮಾಂಕದ ಆಟಗಾರ್ತಿಯಾಗಿ ಭಾರತಿ ಫುಲ್ಮಾಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದೃಢಪಡಿಸಿದರು.

2026ರ ಮಹಿಳಾ ಟಿ20 ವಿಶ್ವಕಪ್ಗಾಗಿ 15 ಸದಸ್ಯರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಪ್ರಕಟಿಸಿದೆ. ನಿರೀಕ್ಷೆಯಂತೆ, ಹರ್ಮನ್ಪ್ರೀತ್ ಕೌರ್ ತಂಡದ ನಾಯಕಿಯಾಗಿದ್ದು, ಸ್ಮೃತಿ ಮಂಧಾನಾ ಉಪನಾಯಕಿಯಾಗಿದ್ದಾರೆ. ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ ಮತ್ತು ರಿಚಾ ಘೋಷ್ ಸೇರಿದಂತೆ ಹಲವಾರು ತಾರೆಯರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಗಾಯದಿಂದಾಗಿ ಅಮನ್ಜೋತ್ ಕೌರ್ ತಂಡದಿಂದ ಹೊರಗುಳಿದಿದ್ದಾರೆ. ಬ್ಯಾಟ್ಸ್ಮನ್ಗಳಾದ ಪ್ರತೀಕಾ ರಾವಲ್ ಮತ್ತು ಹರ್ಲೀನ್ ಡಿಯೋಲ್ ಮತ್ತು ಸ್ಪಿನ್ ಬೌಲಿಂಗ್ ಆಲ್ರೌಂಡರ್ ಸ್ನೇಹಾ ರಾಣಾ ಕೂಡ ತಂಡದ ಭಾಗವಾಗಿಲ್ಲ.
ಭಾರತದ ಮಹಿಳಾ T20 ವಿಶ್ವಕಪ್ 2026 ತಂಡ
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಂದನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಕ್ರಾಂತಿ ಗೌಡ, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್.
ತಂಡದ ಘೋಷಣೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್, ಗಾಯಗೊಂಡಿರುವ ಅಮನ್ಜೋತ್ ಕೌರ್ ಬದಲಿಗೆ ಮಧ್ಯಮ ಕ್ರಮಾಂಕದ ಆಟಗಾರ್ತಿಯಾಗಿ ಭಾರತಿ ಫುಲ್ಮಾಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದೃಢಪಡಿಸಿದರು. ಫುಲ್ಮಾಲಿ 2026ರ ಮಹಿಳಾ ಪ್ರೀಮಿಯರ್ ಲೀಗ್ (WPL) ನಲ್ಲಿ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಪ್ರಭಾವ ಬೀರಿದರು.
10 ಪಂದ್ಯಗಳಿಂದ 17 ವಿಕೆಟ್ಗಳೊಂದಿಗೆ WPL 2026ರ ಜಂಟಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಆಗಿದ್ದ ನಂದನಿ ಶರ್ಮಾ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಶ್ರೀ ಚರಣಿ, ಶ್ರೇಯಾಂಕಾ ಪಾಟೀಲ್ ಮತ್ತು ರಾಧಾ ಯಾದವ್ ಅವರು ಇಂಗ್ಲೆಂಡ್ ಮತ್ತು ವೇಲ್ಸ್ ಪ್ರವಾಸದಲ್ಲಿ ಭಾರತದ ಸ್ಪಿನ್ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಸ್ನೇಹಾ ರಾಣಾ ಮತ್ತು ವೈಷ್ಣವಿ ಶರ್ಮಾ ಅವರಂತಹ ಆಟಗಾರ್ತಿಯರು ಹೊರಗುಳಿದಿದ್ದಾರೆ. ನಾಯಕಿ ಹರ್ಮನ್ಪ್ರೀತ್ ಕೌರ್ ಅವರು, ರಾಧಾ ಯಾದವ್ ಅವರ ಆಲ್ರೌಂಡ್ ಸಾಮರ್ಥ್ಯಕ್ಕಾಗಿ ಶ್ಲಾಘಿಸಿದರು. ವಿಶೇಷವಾಗಿ ಡಬ್ಲ್ಯುಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಅವರ ಸುಧಾರಿತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಆಯ್ಕೆಯಾಗಿದ್ದಾರೆ ಎಂದರು.
ಅನುಭವಿ ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್ ಮತ್ತು ನಂದನಿ ವೇಗದ ದಾಳಿಯನ್ನು ರೂಪಿಸುತ್ತಾರೆ. ಯಸ್ತಿಕಾ ಭಾಟಿಯಾ ಅವರನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.
2026ರ ಮಹಿಳಾ ಟಿ20 ವಿಶ್ವಕಪ್ ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ನಡೆಯಲಿದ್ದು, ಜೂನ್ 14 ರಂದು ಪ್ರಾರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



