ಕ್ರಿಕೆಟ್

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ; ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd

ಆರ್ ಸಿಬಿಯ ಇಂಪ್ಯಾಕ್ಟ್ ಸಬ್ ಆಗಿ ವೆಂಕಟೇಶ್ ಅಯ್ಯರ್, ಕಾನಿಷ್ಕ್ ಚೌಹ್ವಾಣ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್, ಜೋರ್ಡಾನ್ ಕಾಕ್ಸ್ ಇರಲಿದ್ದಾರೆ.

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ; ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd
ಟಾಸ್ ಗೆದ್ದ ರಜತ್ ಪಟಿದಾರ್ ಬೌಲಿಂಗ್ ಆಯ್ಕೆ
Published On :

ಅಹ್ಮದಾಬಾದ್: ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 2026 ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಹ್ಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ನಾಯಕ ರಜತ್ ಪಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಶುಭ್ ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ ತಂಡ ಮೊದಲು ಬ್ಯಾಟಿಂಗ್ ಮಾಡಿ ಆರ್ ಸಿಬಿಗೆ ಗುರಿ ನೀಡಲಿದೆ.

ಇನ್ನು ಆರ್ ಸಿಬಿ ತಂಡದಲ್ಲಿ ಫೈನಲ್ ಗಾಗಿ ಪ್ರಮುಖ ಬದಲಾವಣೆ ಮಾಡಲಾಗಿದ್ದು. ಆಲ್ರೌಂಡರ್ ರೊಮಾರಿಯೋ ಶೆಫರ್ಡ್ ತಂಡಕ್ಕೆ ಮರಳಿದ್ದಾರೆ.

ಉಳಿದಂತೆ ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ, ಜೋಶ್ ಹ್ಯಾಜಲ್‌ವುಡ್, ರಸಿಖ್ ಸಲಾಮ್ ದಾರ್ ಅವರನ್ನೊಳಗೊಂಡ ಬೌಲಿಂಗ್ ಪಡೆ, ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ ಅಗ್ರ ಕ್ರಮಾಂಕದಲ್ಲಿ ಮುಂದುವರೆದಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯಾ ಮತ್ತು ಆಲ್ರೌಂಡರ್ ರೊಮಾರಿಯೋ ಶೆಫರ್ಡ್ ಇದ್ದಾರೆ.

ಆರ್ ಸಿಬಿಯ ಇಂಪ್ಯಾಕ್ಟ್ ಸಬ್ ಆಗಿ ವೆಂಕಟೇಶ್ ಅಯ್ಯರ್, ಕಾನಿಷ್ಕ್ ಚೌಹ್ವಾಣ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್, ಜೋರ್ಡಾನ್ ಕಾಕ್ಸ್ ಇರಲಿದ್ದಾರೆ.

ಅತ್ತ ಗುಜರಾತ್ ನಲ್ಲೂ ಕೆಲ ಬದಲಾವಣೆ ಮಾಡಲಾಗಿದ್ದು, ತಂಡದಲ್ಲಿ ಅರ್ಶದ್ ಖಾನ್ ಸ್ಥಾನ ಪಡೆದಿದ್ದಾರೆ. ಈ ಹಿಂದಿನ ಪಂದ್ಯದಲ್ಲಿ ತಂಡದಲ್ಲಿದ್ದ ಕನ್ನಡಿಗ ಪ್ರಸಿದ್ ಕೃಷ್ಣ , ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ, ಸಾಯಿ ಕಿಶೋರ್ ಇಂಪ್ಯಾಕ್ಟ್ ಸಬ್ ಆಯ್ಕೆಯಲ್ಲಿದ್ದಾರೆ.

ಪ್ಲೇಯಿಂಗ್ XI ತಂಡಗಳು ಇಂತಿವೆ

ಗುಜರಾತ್ ಟೈಟನ್ಸ್:

ಸಾಯಿ ಸುದರ್ಶನ್, ಶುಭಮನ್ ಗಿಲ್ (ಸಿ), ಜೋಸ್ ಬಟ್ಲರ್ (ಡಬ್ಲ್ಯೂ), ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಶೀದ್ ಖಾನ್, ಅರ್ಷದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್

ಇಂಪ್ಯಾಕ್ಟ್ ಸಬ್‌ಗಳು: ಪ್ರಸಿದ್ಧ್ ಕೃಷ್ಣ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ, ಸಾಯಿ ಕಿಶೋರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ಸಿ), ಜಿತೇಶ್ ಶರ್ಮಾ (ಡಬ್ಲ್ಯೂ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ, ಜೋಶ್ ಹ್ಯಾಜಲ್‌ವುಡ್, ರಾಸಿಖ್ ಸಲಾಮ್ ದಾರ್

ಇಂಪ್ಯಾಕ್ಟ್ ಸಬ್‌ಗಳು: ವೆಂಕಟೇಶ್ ಅಯ್ಯರ್, ಕಾನಿಷ್ಕ್ ಚೋಹನ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್, ಜೋರ್ಡಾನ್ ಕಾಕ್ಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.