IPL 2026: ಈ ಸಲನೂ ಕಪ್ ನಮ್ದೇ... ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB; GT ಧೂಳಿಪಟ
ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 155 ರನ್ ಗಳಿಸಿತು.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿದೆ.
ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 155 ರನ್ ಗಳಿಸಿತು.
ಗುಜರಾತ್ ತಂಡದ ಪರವಾಗಿ, ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದರು.
ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ ಮತ್ತು ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಪಡೆದರೆ, ರಸಿಕ್ ಸಲಾಂ ದಾರ್ ಮೂರು ವಿಕೆಟ್ ಪಡೆದರು. ಕೃನಾಲ್ ಪಾಂಡ್ಯ ಒಂದು ವಿಕೆಟ್ ಪಡೆದರು. ಎರಡು ವಿಕೆಟ್ ಗಳಿಸುವ ಮೂಲಕ, ಭುವನೇಶ್ವರ್ ಕುಮಾರ್ ಈಗಾಗಲೇ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಕಗಿಸೊ ರಬಾಡ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಗೆಲುವಿಗೆ 156 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ, ವಿರಾಟ್ ಕೊಹ್ಲಿ(75) ಅಜೇಯ ಭರ್ಜರಿ ಅರ್ಧ ಶತಕ ಹಾಗೂ ವೆಂಕಟೇಶ್ ಅಯ್ಯರ್(32) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ 18 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 161 ರನ್ ಗಳಿಸುವ ಮೂಲಕ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



