ಕ್ರಿಕೆಟ್

ICC Cricket World Cup 2027 ವೇಳಾಪಟ್ಟಿ; ಅ.7ರಿಂದ ಭಾರತದ ಅಭಿಯಾನ ಆರಂಭ, 3 ಬಾರಿ ಬದ್ಧ ಶತ್ರುಗಳ ಕದನ?

2027ರ ವಿಶ್ವಕಪ್‌ನ ಆರಂಭಿಕ ಗುಂಪುಗಳನ್ನೂ ಐಸಿಸಿ ಪ್ರಕಟಿಸಿದ್ದು, ಭಾರತ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಆಸ್ಟ್ರೇಲಿಯಾ, ಪಾಕಿಸ್ತಾನ, ಅಫ್ಘಾನಿಸ್ತಾನ, ಸಹ ಆತಿಥೇಯ ಜಿಂಬಾಬ್ವೆ ಹಾಗೂ ಒಂದು ಅರ್ಹತಾ ತಂಡ ಇರಲಿವೆ.

ICC Cricket World Cup 2027 ವೇಳಾಪಟ್ಟಿ; ಅ.7ರಿಂದ ಭಾರತದ ಅಭಿಯಾನ ಆರಂಭ, 3 ಬಾರಿ ಬದ್ಧ ಶತ್ರುಗಳ ಕದನ?
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್
Published On :

ನವದೆಹಲಿ: 2027ರ ಏಕದಿನ ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗುರುವಾರ ಪ್ರಕಟಿಸಿದೆ.

2023ರ ವಿಶ್ವಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮತ್ತೊಮ್ಮೆ ಆರಂಭಿಕ ಪಂದ್ಯದಲ್ಲೇ ಕಣಕ್ಕಿಳಿಯಲಿದ್ದು, ಅಕ್ಟೋಬರ್ 7ರಂದು ಕೇಪ್‌ಟೌನ್‌ನಲ್ಲಿ ಪಂದ್ಯ ನಡೆಯಲಿದೆ.

2027ರ ವಿಶ್ವಕಪ್‌ನ ಆರಂಭಿಕ ಗುಂಪುಗಳನ್ನೂ ಐಸಿಸಿ ಪ್ರಕಟಿಸಿದ್ದು, ಭಾರತ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಆಸ್ಟ್ರೇಲಿಯಾ, ಪಾಕಿಸ್ತಾನ, ಅಫ್ಘಾನಿಸ್ತಾನ, ಸಹ ಆತಿಥೇಯ ಜಿಂಬಾಬ್ವೆ ಹಾಗೂ ಒಂದು ಅರ್ಹತಾ ತಂಡ ಇರಲಿವೆ.

ಇನ್ನು ‘ಬಿ’ ಗುಂಪಿನಲ್ಲಿ ಸಹ ಆತಿಥೇಯ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಮತ್ತೊಂದು ಅರ್ಹತಾ ತಂಡ ಸ್ಥಾನ ಪಡೆದಿವೆ.

ಭಾರತ-ಪಾಕಿಸ್ತಾನ ಕದನ

ಭಾರತ ತನ್ನ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 7ರಂದು ಆಸ್ಟ್ರೇಲಿಯಾ ವಿರುದ್ಧ ಆರಂಭಿಸಲಿದ್ದು, ಕೇವಲ ಮೂರು ದಿನಗಳ ಬಳಿಕ ಪಾಕಿಸ್ತಾನವನ್ನು ಎದುರಿಸಲಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿರುವುದರಿಂದ ಕ್ರಿಕೆಟ್ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಿದೆ. ಅಕ್ಟೋಬರ್ 10ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ.

3 ಬಾರಿ ಬದ್ಧ ಶತ್ರುಗಳ ಕದನ?

ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿರುವುದರಿಂದ ಟೂರ್ನಿಯಲ್ಲಿ ಉಭಯ ತಂಡಗಳು ಗರಿಷ್ಠ ಮೂರು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಆರಂಭಿಕ ಗುಂಪು ಹಂತದ ಬಳಿಕ ಸೂಪರ್ 7 ಹಂತದಲ್ಲಿ ಮತ್ತೊಮ್ಮೆ ಎದುರಾಗಬಹುದು.

ನಂತರ ಎರಡೂ ತಂಡಗಳು ಸೆಮಿಫೈನಲ್ ಅಥವಾ ಫೈನಲ್‌ಗೆ ತಲುಪಿದರೆ ಮತ್ತೊಂದು ಮುಖಾಮುಖಿಯ ಸಾಧ್ಯತೆಯೂ ಇದೆ.

2003ರ ನೆನಪು, 2023ರ ರಿವೇಂಜ್ ಗೆ ಅವಕಾಶ

ದಕ್ಷಿಣ ಆಫ್ರಿಕಾದಲ್ಲಿ ಕೊನೆಯ ಬಾರಿ 2003ರಲ್ಲಿ ಏಕದಿನ ವಿಶ್ವಕಪ್ ನಡೆದಾಗಲೂ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಇದೀಗ 2027ರ ವಿಶ್ವಕಪ್‌ಗೆ ಭಾರತ-ಆಸ್ಟ್ರೇಲಿಯಾ ಪಂದ್ಯದ ಮೂಲಕ ಚಾಲನೆ ದೊರೆಯುತ್ತಿರುವುದು ವಿಶೇಷವಾಗಿದೆ.

2023ರ ವಿಶ್ವಕಪ್ ಫೈನಲ್‌ನಲ್ಲೂ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ 2027ರ ಟೂರ್ನಿಯ ಮೊದಲ ಪಂದ್ಯವೇ ಆ ಫೈನಲ್‌ನ ಮರುಪಂದ್ಯವಾಗಿ ಗಮನ ಸೆಳೆಯಲಿದೆ.

‘ಸೂಪರ್ 7’ಗೆ ಏಳು ತಂಡಗಳು

ಎರಡು ಆರಂಭಿಕ ಗುಂಪುಗಳಲ್ಲಿ ಸ್ಥಾನ ಪಡೆದಿರುವ ತಂಡಗಳ ಪೈಕಿ ಒಟ್ಟು ಏಳು ಅತ್ಯುತ್ತಮ ತಂಡಗಳು ಮುಂದಿನ ‘ಸೂಪರ್ ಸೆವೆನ್’ ಹಂತಕ್ಕೆ ಅರ್ಹತೆ ಪಡೆಯಲಿವೆ. ಈ ಹಂತದಿಂದ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.

2027ರ ವಿಶ್ವಕಪ್‌ನ ಫೈನಲ್ ಪಂದ್ಯ ನವೆಂಬರ್ 21ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ.

ಗುಂಪು ‘ಎ’:

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಅಫ್ಘಾನಿಸ್ತಾನ, ಜಿಂಬಾಬ್ವೆ, ಅರ್ಹತಾ ತಂಡ ‘ಎ’.

ಗುಂಪು ‘ಬಿ’:

ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ, ಅರ್ಹತಾ ತಂಡ ‘ಬಿ’.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.