ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ; ಪಾಕ್ ಗೆಲ್ಲಲು 212 ರನ್ ಗುರಿ ನೀಡಿದ ಭಾರತ!
ಸಾಹಿಬ್‌ಜಾದಾ ಫರ್ಹಾನ್ ನೇತೃತ್ವದ ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್, ಮೊದಲಿಗೆ ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.

ನಿಶಿನ್: ಜಪಾನ್ ನ ನಿಶಿನ್ ನಗರದ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಏಷ್ಯನ್ ಗೇಮ್ಸ್ 2026ರ ಫೈನಲ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಮತ್ತು ತಿಲಕ್ ವರ್ಮಾ ಅವರ ಅರ್ಧಶತಕಗಳ ನೆರವಿನಿಂದ ಭಾರತವು 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿತು.
ಇದಕ್ಕೂ ಮುನ್ನ ಸಾಹಿಬ್‌ಜಾದಾ ಫರ್ಹಾನ್ ನೇತೃತ್ವದ ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್, ಮೊದಲಿಗೆ ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆರಂಭಿಕ ಆಟಗಾರರಾದ ವೈಭವ್ ಸೂರ್ಯವಂಶಿ 9 ಎಸೆತಗಳಲ್ಲಿ 2 ಸಿಕ್ಸರ್ ಗಳೊಂದಿಗೆ 15 ರನ್ ಗಳಿಸಿ ಉಸ್ಮಾನ್ ಖಾನ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಅಭಿಷೇಕ್ ಶರ್ಮಾ 7 ಸಿಕ್ಸರ್, 3 ಬೌಂಡರಿಗಳೊಂದಿಗೆ 61 ರನ್ ಸಿಡಿಸಿದರು. ಬಳಿಕ ಉಸ್ಮಾನ್ ಖಾನ್ ಗೆ ಸ್ಟಂಪ್ ಔಟ್ ಮಾಡಿದರು. ಬಳಿಕ ಬಂದ ಸಂಜು ಸ್ಯಾಮ್ಸನ್ ಕೇವಲ 2 ರನ್ ಗಳಿಗೆ ಔಟಾದರೆ, ನಾಯಕ ಶ್ರೇಯಸ್ ಅಯ್ಯರ್ 21, ಇಶಾನ್ ಕಿಶಾನ್ 20 ರನ್ ಗಳಿಸಿದರು.

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!
ತಿಲಕ್ ವರ್ಮಾ 51 ರನ್ ಸಿಡಿಸಿ ಅಜೇಯರಾಗಿ ಉಳಿದರು. ಶಿವಂ ದುಬೆ 27 ರನ್, ಅಕ್ಷರ್ ಪಟೇಲ್ 1 ರನ್ ಗಳಿಸುವ ಮೂಲಕ ಔಟಾಗದೆ ಉಳಿದರು. ಹೀಗಾಗಿ ಭಾರತ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿತು.
ಪಾಕಿಸ್ತಾನ ಪರ ಅಹ್ಮದ್ ದಾನಿಯಲ್ ಹಾಗೂ ಅರ್ಫತ್ ಮಿನ್ ಹ್ಯಾಸ್ ತಲಾ 2 ವಿಕೆಟ್ ಪಡೆದರೆ, ಸಾಯಿಮ್ ಅಯುಬ್, ಅಬ್ರಾರ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


