15 ವರ್ಷಕ್ಕೆ ಇತಿಹಾಸ ಸೃಷ್ಟಿಸಿದ ವೈಭವ್: Asian Gamesನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಯುವ ಕ್ರಿಕೆಟರ್!
ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ. ಶನಿವಾರ ನಡೆದ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ತಂಡ ಚಿನ್ನದ ಪದಕ ಗೆದ್ದಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 211 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು.

ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ. ಶನಿವಾರ ನಡೆದ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ತಂಡ ಚಿನ್ನದ ಪದಕ ಗೆದ್ದಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 211 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ನಿಗದಿತ ಓವರ್ ನಲ್ಲಿ 196 ರನ್ ಗಳಿಸಲಷ್ಟೇ ಶಕ್ತವಾಗಿದ್ದು 19 ರನ್ ಗಳಿಂದ ಸೋಲು ಕಂಡಿತು.
ಅಕ್ಟೋಬರ್ 3ರಂದು ನಡೆದ ಏಷ್ಯನ್ ಕ್ರೀಡಾಕೂಟದ ಫೈನಲ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನವನ್ನು 19 ರನ್‌ಗಳಿಂದ ಸೋಲಿಸಿತು. ಈ ದಿನ ವೈಭವ್‌ಗೆ 15 ವರ್ಷ 190 ದಿನಗಳು. ಅವರು 2011ರ ಮಾರ್ಚ್ 27ರಂದು ಬಿಹಾರದಲ್ಲಿ ಜನಿಸಿದ್ದನು. ವೈಭವ್ ಭಾರತಕ್ಕಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ ಅತ್ಯಂತ ಕಿರಿಯ ಆಟಗಾರರಾಗಿದ್ದು, ಈ ವರ್ಷದ ಚೊಚ್ಚಲ ಪಂದ್ಯದಲ್ಲೇ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಭಾರತೀಯ ಎಂಬ ದಾಖಲೆಯನ್ನು ಈ ಹಿಂದೆ ಶೂಟರ್ ಸೌರಭ್ ಚೌಧರಿ ಹೊಂದಿದ್ದರು. 2015ರ ಏಷ್ಯನ್ ಕ್ರೀಡಾಕೂಟದಲ್ಲಿ ಅವರು 16 ವರ್ಷದವರಾಗಿದ್ದಾಗ ಚಿನ್ನದ ಪದಕ ಗೆದ್ದರು.
ಏಷ್ಯನ್ ಕ್ರೀಡಾಕೂಟದ ಫೈನಲ್ ಪಂದ್ಯದ ನಂತರ ತೆಗೆದ ವೈಭವ್ ಸೂರ್ಯವಂಶಿ ಅವರ ವಿಡಿಯೋ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ, ಅವರು ಐಸಿಸಿ ಅಧ್ಯಕ್ಷ ಜಯ್ ಶಾ ಅವರನ್ನು ಭೇಟಿಯಾಗಿ ಅವರ ಪಾದಗಳನ್ನು ಮುಟ್ಟುವುದನ್ನು ಕಾಣಬಹುದು. ಜಯ್ ಶಾ ಸ್ವತಃ ಚಾಂಪಿಯನ್ ಭಾರತೀಯ ತಂಡದ ಆಟಗಾರರಿಗೆ ಪದಕಗಳನ್ನು ಪ್ರದಾನ ಮಾಡಿದರು.
ಫೈನಲ್ ಪಂದ್ಯಕ್ಕೆ ಸಂಬಂಧಿಸಿದಂತೆ ಭಾರತ ಮೊದಲು ಬ್ಯಾಟ್ ಮಾಡಿ 211 ರನ್ ಗಳಿಸಿತು. ಅಭಿಷೇಕ್ ಶರ್ಮಾ 61 ರನ್ ಗಳಿಸಿದರು ಮತ್ತು ತಿಲಕ್ ವರ್ಮಾ ಅಜೇಯ 51 ರನ್ ಗಳಿಸಿದರು. ಗುರಿಯನ್ನು ಬೆನ್ನಟ್ಟಿದ ಹಸನ್ ನವಾಜ್ 96 ರನ್ ಗಳಿಸಿ ಕೊನೆಯ ಕ್ಷಣದವರೆಗೂ ಪಾಕಿಸ್ತಾನದ ಭರವಸೆಯನ್ನು ಜೀವಂತವಾಗಿಸಿದರು. ಆದರೆ ತಂಡವು 19 ರನ್ ನಿಂದ ಸೋಲು ಕಂಡಿತು. ಭಾರತದ ಪರ ಶಿವಂ ದುಬೆ, ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



