Asian Games 2026: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
ಪಿಟಿಐ ವರದಿಯ ಪ್ರಕಾರ, ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಸೆಪ್ಟೆಂಬರ್ 24 ರಂದು ಆರಂಭವಾಗಲಿರುವ ಏಷ್ಯನ್ ಗೇಮ್ಸ್ ನಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚಿನ ಗಮನ ಹರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ವಿ.ವಿ.ಎಸ್. ಲಕ್ಷ್ಮಣ್ ಅವರನ್ನು ನೇಮಕ ಮಾಡಿದೆ.
ಪಿಟಿಐ ವರದಿಯ ಪ್ರಕಾರ, ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಗಮನಾರ್ಹ ವಿಚಾರ ಎಂದರೆ, ಏಷ್ಯನ್ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ನಂತರ ಭಾರತ ಕ್ರಿಕೆಟ್ ತಂಡ 2ನೇ ಅತಿದೊಡ್ಡ ಸಹಾಯಕ ಸಿಬ್ಬಂದಿಯನ್ನು ಹೊಂದಿದೆ. ವಿ.ವಿ.ಎಸ್. ಲಕ್ಷ್ಮಣ್ ಅವರೊಂದಿಗೆ ಮಾಜಿ ಕ್ರಿಕೆಟಿಗರುಗಳಾದ ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್) ಹಾಗೂ ಸುನಿಲ್ ಜೋಶಿ (ಬೌಲಿಂಗ್ ಕೋಚ್) ಅವರನ್ನು ಸಹಾಯಕ ಸಿಬ್ಬಂದಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚುವರಿಯಾಗಿ, ಮರೂಫ್ ಫಜಂದರ್ ಏಷ್ಯನ್ ಕ್ರೀಡಾಕೂಟದಲ್ಲಿ ಸಹಾಯಕ ಸಿಬ್ಬಂದಿಯ ತಂಡದ ನಾಯಕರಾಗಿ ಕಾರ್ಯನಿರ್ವಹಿಸುತ್ತಾರೆ.
ಟೀಂ ಇಂಡಿಯಾದ ನಿಯಮಿತ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ಅವರು ಇದೇ ಅವಧಿಯಲ್ಲಿ ತಾಯ್ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಯಲ್ಲಿ ನಿರತರಾಗಿರಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಸ್ಪ್ಲಿಟ್ ಕೋಚಿಂಗ್ ಮಾದರಿಯನ್ನು ಅನುಸರಿಸಿದ್ದು, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ(NCA) ಮುಖ್ಯಸ್ಥರಾಗಿರುವ ವಿ.ವಿ.ಎಸ್. ಲಕ್ಷ್ಮಣ್ ಅವರಿಗೆ ಏಷ್ಯನ್ ಗೇಮ್ಸ್‌ನ ಜವಾಬ್ದಾರಿಯನ್ನು ವಹಿಸಿದೆ.
ಏಷ್ಯನ್ ಗೇಮ್ಸ್ ನಲ್ಲಿ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡವು ಬಲಿಷ್ಠ ಆಟಗಾರರನ್ನು ಒಳಗೊಂಡಿದೆ. ತಂಡದಲ್ಲಿ ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್ ಮತ್ತು ಸಂಜು ಸ್ಯಾಮ್ಸನ್ ಅವರಂತಹ ಅನುಭವಿಗಳ ಜೊತೆಗೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ ಹಾಗೂ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


