ಕ್ರಿಕೆಟ್

T20 Cricket: 47ನೇ ವಯಸ್ಸಿನಲ್ಲಿ 'ವಿಶ್ವ ದಾಖಲೆ' ಬರೆದ ಪಾಕಿಸ್ತಾನದ ಇಮ್ರಾನ್ ತಾಹಿರ್! ಇಲ್ಲಿದೆ ಸ್ಫೋಟಕ ಮಾಹಿತಿ...

ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) ನಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಪರ ಆಡುತ್ತಿರುವ ಇಮ್ರಾನ್ ತಾಹಿರ್ ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

T20 Cricket: 47ನೇ ವಯಸ್ಸಿನಲ್ಲಿ 'ವಿಶ್ವ ದಾಖಲೆ' ಬರೆದ ಪಾಕಿಸ್ತಾನದ ಇಮ್ರಾನ್ ತಾಹಿರ್! ಇಲ್ಲಿದೆ ಸ್ಫೋಟಕ ಮಾಹಿತಿ...
ಇಮ್ರಾನ್ ತಾಹಿರ್
Published On :

ಎಂಟು ವರ್ಷಗಳ ವೃತ್ತಿಜೀವನದ ನಂತರ ಪಾಕಿಸ್ತಾನದ ಇಮ್ರಾನ್ ತಾಹಿರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು, ಆದರೆ ಅನುಭವಿ ಸ್ಪಿನ್ನರ್ ವಿಶ್ವದಾದ್ಯಂತ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಲೇ ಇದ್ದಾರೆ.

ಇಮ್ರಾನ್ ತಾಹಿರ್ ಅವರು ತಮ್ಮ 47ನೇ ವಯಸ್ಸಿನಲ್ಲಿ, ಟಿ20 ಕ್ರಿಕೆಟ್‌ನಲ್ಲಿ ಐದು ವಿಕೆಟ್ ಪಡೆದ ಅತ್ಯಂತ ಹಿರಿಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) ನಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಪರ ಆಡುತ್ತಿರುವ ಇಮ್ರಾನ್ ತಾಹಿರ್ ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

ಸೆಂಟ್ ಲೂಸಿಯಾ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇಮ್ರಾನ್ ತಾಹಿರ್ ತಮ್ಮ ಸ್ಪಿನ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಅಕ್ಷರಶಃ ನಡುಗಿಸಿದರು. ಕೇವಲ 4 ಓವರ್‌ಗಳಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದರು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಕುಕ್ ಐಲ್ಯಾಂಡ್ಸ್‌ನ ತೋಮಕನುತೆ ರಿತಾವಾ ಹೆಸರಿನಲ್ಲಿತ್ತು. ಅವರು 2022ರಲ್ಲಿ ತಮ್ಮ 46 ವರ್ಷ 299 ದಿನಗಳ ಪ್ರಾಯದಲ್ಲಿ 5 ವಿಕೆಟ್ ಪಡೆದಿದ್ದರು. ಇದೀಗ 47 ವರ್ಷದ ಇಮ್ರಾನ್ ತಾಹಿರ್ ಆ ದಾಖಲೆಯನ್ನು ಅಳಿಸಿ ಹಾಕಿ ಹೊಸ ವರ್ಲ್ಡ್​ ರೆಕಾರ್ಡ್​ ಬರೆದಿದ್ದಾರೆ.

ಕೇವಲ ಬೌಲಿಂಗ್ ಮಾತ್ರವಲ್ಲದೆ, ಇತ್ತೀಚೆಗಷ್ಟೇ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಸತತ ಗ್ಲೋಬಲ್ ಸೂಪರ್ ಲೀಗ್ (GSL) ಟಿ20 ಟ್ರೋಫಿ ಗೆದ್ದುಕೊಡುವ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನೂ ತಾಹಿರ್ ತಮ್ಮದಾಗಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.