ಮತ್ತೊಬ್ಬ ಕ್ರಿಕೆಟ್ ಲೆಜೆಂಡ್ ದಾಖಲೆ ಮುರಿಯಲು ಕ್ರಿಕೆಟ್ ಕಿಡ್ ವೈಭವ್ ಸೂರ್ಯವಂಶಿ ಸಜ್ಜು
ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11 ನಲ್ಲಿ ಆಡುವ ಅವಕಾಶ ಸಿಕ್ಕಿದರೆ, ಅವರು ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಲೆಜೆಂಡ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13 ರಂದು ಭಾರತದಲ್ಲಿ ಆರಂಭವಾಗಲಿದೆ. ಈ ಸರಣಿಗೆ ವೈಭವ್ ಸೂರ್ಯವಂಶಿಯನ್ನು ಆಯ್ಕೆ ಮಾಡಲಾಗಿದೆ. ವೈಭವ್ಗೆ ಪ್ಲೇಯಿಂಗ್ 11ನಲ್ಲಿ ಆಡುವ ಅವಕಾಶ ಸಿಗುವುದನ್ನು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದಾರೆ.
ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11 ನಲ್ಲಿ ಆಡುವ ಅವಕಾಶ ಸಿಕ್ಕಿದರೆ, ಅವರು ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಲೆಜೆಂಡ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.
ಈ ವರೆಗೂ ವೈಭವ್ ಸೂರ್ಯವಂಶಿ ಟೀಂ ಇಂಡಿಯಾ ಪರ 6 ಟಿ20 ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನೂ ವಿದೇಶಿ ನೆಲದಲ್ಲಿ ಆಡಿದ್ದಾರೆ. ಇದೇ ಮೊದಲ ಬಾರಿಗೆ ತವರು ನೆಲದಲ್ಲಿ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಲಿದ್ದಾರೆ.
ಸೆಹ್ವಾಗ್ ಭಾರತ ಪರ 19 ಟಿ20 ಪಂದ್ಯಗಳನ್ನು ಆಡಿದ್ದು, 145.38 ಸ್ಟ್ರೈಕ್ ರೇಟ್ನಲ್ಲಿ 16 ಸಿಕ್ಸರ್ ಗಳೊಂದಿಗೆ 394 ರನ್ ಗಳಿಸಿದ್ದಾರೆ. ಇನ್ನು ವೈಭವ್ ಸೂರ್ಯವಂಶಿ 6 ಪಂದ್ಯಗಳಲ್ಲಿ ಇದುವರೆಗೆ ಒಟ್ಟು 14 ಸಿಕ್ಸರ್ಗಳನ್ನು ಗಳಿಸಿದ್ದಾರೆ. ಈ ಸರಣಿಯಲ್ಲಿ ವೈಭವ್, 3 ಸಿಕ್ಸರ್ಗಳನ್ನು ಗಳಿಸಿದರೆ ಸೆಹ್ವಾಗ್ ಅವರನ್ನು ಹಿಂದಿಕ್ಕಲ್ಲಿದ್ದಾರೆ.
ಇನ್ನು ಭಾರತದ ಪರ ಅತ್ಯಧಿಕ ಸಿಕ್ಸರ್ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದು, ಇಲ್ಲಿಯವರೆಗೆ 205 ಸಿಕ್ಸರ್ಗಳನ್ನು ಗಳಿಸಿದ್ದರೆ. ಸೂರ್ಯಕುಮಾರ್ ಯಾದವ್ 179 ಸಿಕ್ಸರ್ಗಳೊಂದಿಗೆ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. 126 ಸಿಕ್ಸರ್ಗಳೊಂದಿಗೆ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 124 ಸಿಕ್ಸರ್ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಭಿಷೇಕ್ ಶರ್ಮಾ 104 ಸಿಕ್ಸರ್ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


