India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಸೇರಿಸಿತು.

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಭಾನುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಸೇರಿಸಿತು. ಆಲ್ರೌಂಡರ್ ಅಜ್ಮತುಲ್ಲಾ ಒಮರ್ಜಾಯ್ ಅಜೇಯ 64 ರನ್ ಸಿಡಿಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು.
ಅಫ್ಘಾನಿಸ್ತಾನ ತಂಡಕ್ಕೆ ಕಮ್ಬ್ಯಾಕ್ ಹೀರೋ ಜಸ್ಪ್ರೀತ್ ಬುಮ್ರಾ ಮೊದಲ ಓವರ್ನಲ್ಲೇ ಆಘಾತ ನೀಡಿದರು. ಸ್ಫೋಟಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಖಾತೆ ತೆರೆಯದೇ ಔಟ್ ಆದರು. ನಂತರ 10 ಎಸೆತಗಳಲ್ಲಿ 11 ರನ್ಗಳಿಸಿದ್ದ ನಾಯಕ ಇಬ್ರಾಹಿಂ ಜಡ್ರಾನ್ ರನ್ಔಟ್ ಆದರೆ, ಸದಿಕುಲ್ಲಾ ಅಟಲ್(13 ರನ್) ಅರ್ಶ್‌ದೀಪ್ ಸಿಂಗ್ ಬೌಲಿಂಗ್‌ನಲ್ಲಿ ಬುಮ್ರಾಗೆ ಕ್ಯಾಚ್ ನೀಡಿ ಔಟ್ ಆದರು.
ಗೆಲುವಿಗೆ 157 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ, ಅಭಿಷೇಕ್ ಶರ್ಮಾ ಅವರ 82 ರನ್ ಗಳ ಭರ್ಜರಿ ಅರ್ಧ ಶತಕ ಹಾಗೂ ಇಶಾನ್ ಕಿಶನ್(42) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 13.4 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 157 ರನ್ ಗಳಿಸುವ ಮೂಲಕ ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



