ಸದ್ಯದ ಸನ್ನಿವೇಶದಲ್ಲಿ ಇದು ಪ್ರಜ್ಞಾಪೂರ್ವಕ ಹಾಗೂ ಸಾಂಸ್ಥಿಕ ನಿರ್ಧಾರ: ಏಷ್ಯಾ ಕಪ್ ಟ್ರೋಫಿ ವಿವಾದ ಕುರಿತು ದೇವಜಿತ್ ಸೈಕಿಯಾ
ದುಬೈನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಶ್ರೀಲಂಕಾವನ್ನು 72 ರನ್‌ಗಳಿಂದ ಸೋಲಿಸಿತು. ಆದರೆ, ನಖ್ವಿ ಅವರಿಂದ ಟ್ರೋಫಿಯನ್ನು ಪಡೆಯಲು ನಿರಾಕರಿಸಿತು.

ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮತ್ತು ಪಾಕಿಸ್ತನಾ ಕ್ರಿಕೆಟ್ ಮಂಡಳಿ (PCB)ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರಿಂದ ಏಷ್ಯಾ ಕಪ್ ಟ್ರೋಫಿಯನ್ನು ಸ್ವೀಕರಿಸಲು ಮಹಿಳಾ ಕ್ರಿಕೆಟ್ ತಂಡ ನಿರಾಕರಿಸಿದ್ದು, ಸದ್ಯದ ಸನ್ನಿವೇಶಗಳು ಮತ್ತು ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಮಂಡಳಿ ಕೈಗೊಂಡ 'ಪ್ರಜ್ಞಾಪೂರ್ವಕ ಹಾಗೂ ಸಾಂಸ್ಥಿಕ' ನಿರ್ಧಾರವಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸೋಮವಾರ ತಿಳಿಸಿದ್ದಾರೆ.
ದುಬೈನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಶ್ರೀಲಂಕಾವನ್ನು 72 ರನ್‌ಗಳಿಂದ ಸೋಲಿಸಿತು. ಆದರೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟ ಘಟನೆಯ ನಂತರ 2025ರ ಏಷ್ಯಾ ಕಪ್ ವೇಳೆ ಪುರುಷರ ತಂಡದ ಹಾದಿಯನ್ನೇ ಮುಂದುವರಿಸುತ್ತಾ, ಮಹಿಳಾ ತಂಡವು ನಖ್ವಿ ಅವರಿಂದ ಟ್ರೋಫಿಯನ್ನು ಪಡೆಯಲು ನಿರಾಕರಿಸಿತು.
'ಸದ್ಯದ ಸನ್ನಿವೇಶದ ಎಲ್ಲ ಅಂಶಗಳನ್ನು ಪರಿಗಣಿಸಿ ನಾವು ಒಂದು ನಿರ್ದಿಷ್ಟ ನಿರ್ಧಾರವನ್ನು ಕೈಗೊಂಡಿದ್ದೆವು; ಅಂತಹ ಪರಿಸ್ಥಿತಿಯಲ್ಲಿ ಭಾರತೀಯ ತಂಡವು ಟ್ರೋಫಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂಬ ನಮ್ಮ ನಿಲುವನ್ನು ನಾವು ಮೊದಲೇ ಎಸಿಸಿ (ACC) ಗೆ ತಿಳಿಸಿದ್ದೆವು' ಎಂದು ಸೈಕಿಯಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.
'ದೇಶದಲ್ಲಿನ ಸನ್ನಿವೇಶ ಮತ್ತು ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಸ್ತಾಪಿತ ರೀತಿಯಲ್ಲಿ ತಂಡವು ಟ್ರೋಫಿಯನ್ನು ಸ್ವೀಕರಿಸುವುದು ಸೂಕ್ತವಲ್ಲ ಎಂದು ಬಿಸಿಸಿಐ ಭಾವಿಸಿತು' ಎಂದರು.
'ಇದು ಸಂಸ್ಥೆಯ ದೃಢವಾದ ನಿರ್ಧಾರವಾಗಿದ್ದು, ನಾವು ಈ ಹಿಂದೆ ವ್ಯಕ್ತಪಡಿಸಿದ್ದ ನಿಲುವನ್ನೇ ಪ್ರತಿಬಿಂಬಿಸುತ್ತದೆ; ಇದು ಆಟಗಾರರನ್ನಾಗಲಿ, ಪಂದ್ಯಾವಳಿಯನ್ನಾಗಲಿ ಅಥವಾ ಕ್ರೀಡೆಯನ್ನಾಗಲಿ ಗುರಿಯಾಗಿಸಿಕೊಂಡಿರಲಿಲ್ಲ' ಎಂದು ಅವರು ಹೇಳಿದರು.
ಕಳೆದ ವರ್ಷದ ಏಪ್ರಿಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಮೇ ತಿಂಗಳಲ್ಲಿ ಈ ಎರಡು ದೇಶಗಳ ನಡುವೆ ಸಂಕ್ಷಿಪ್ತ ಮಿಲಿಟರಿ ಮುಖಾಮುಖಿಯೂ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



