ಟೆಸ್ಟ್ ಸೋಲಿನ ಬೆನ್ನಲ್ಲೇ ಪಾಕಿಸ್ತಾನಕ್ಕೆ ತೀವ್ರ ಹಿನ್ನಡೆ: ಭಾರಿ ದಂಡ ವಿಧಿಸಿದ ICC; WTC ಅಂಕ ಕಡಿತ!
ಪಾಕಿಸ್ತಾನ ಲೀಡ್ಸ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಒಂದು ಇನಿಂಗ್ಸ್ ಮತ್ತು 103 ರನ್‌ಗಳಿಂದ, ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 194 ರನ್‌ಗಳಿಂದ ಮತ್ತು ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ 8 ವಿಕೆಟ್‌ಗಳಿಂದ ಸೋಲು ಕಂಡಿದೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸ್ಲೋ ಓವರ್-ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಾಕಿಸ್ತಾನಕ್ಕೆ ಸೋಮವಾರ ದಂಡ ವಿಧಿಸಲಾಗಿದೆ. ಇದರೊಂದಿಗೆ, ತಂಡದ 'ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್' ಅಂಕಪಟ್ಟಿಯಿಂದ 11 ಅಂಕಗಳನ್ನು ಕಡಿತಗೊಳಿಸಲಾಯಿತು. ಆತಿಥೇಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 0-3 ಅಂತರದಿಂದ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನವು, 'ನಿಗದಿತ ಸಮಯದ ವಿನಾಯಿತಿಗಳನ್ನು ಪರಿಗಣಿಸಿದ ನಂತರವೂ' ಗುರಿಗಿಂತ 11 ಓವರ್‌ಗಳಷ್ಟು ಹಿಂದೆ ಬಿದ್ದಿರುವುದು ಕಂಡುಬಂದಿದೆ ಎಂದು ಐಸಿಸಿ (ICC) ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.
ಪಾಕಿಸ್ತಾನವು ಲೀಡ್ಸ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಒಂದು ಇನಿಂಗ್ಸ್ ಮತ್ತು 103 ರನ್‌ಗಳಿಂದ, ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 194 ರನ್‌ಗಳಿಂದ ಮತ್ತು ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ 8 ವಿಕೆಟ್‌ಗಳಿಂದ ಸೋಲು ಕಂಡಿದೆ.
'ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದ ವೇಳೆ ನಿಧಾನಗತಿಯ ಓವರ್-ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಾಕಿಸ್ತಾನದ ಮೇಲೆ ಎರಡು ರೀತಿಯ ಕ್ರಮಗಳನ್ನು (ದಂಡ ಮತ್ತು ಅಂಕ ಕಡಿತ) ಕೈಗೊಳ್ಳಲಾಗಿದೆ' ಎಂದು ಐಸಿಸಿ ಹೇಳಿದೆ.
ಐಸಿಸಿ ಪಂದ್ಯದ ರೆಫರಿ ರಂಜನ್ ಮದುಗಲೆ, ಮೈದಾನದ ಅಂಪೈರ್‌ಗಳಾದ ಪಾಲ್ ರೈಫೆಲ್ ಮತ್ತು ಕ್ರಿಸ್ ಗಫಾನಿ, ಮೂರನೇ ಅಂಪೈರ್ ಅಲ್ಲಾಹುದೀನ್ ಪಾಲೇಕರ್ ಹಾಗೂ ನಾಲ್ಕನೇ ಅಂಪೈರ್ ರಸೆಲ್ ವಾರೆನ್ ಅವರು ಈ ನಿರ್ಬಂಧಗಳನ್ನು ವಿಧಿಸಿದ್ದಾರೆ.
'ಇದರ ಪರಿಣಾಮವಾಗಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯ ಪಾಕಿಸ್ತಾನದ ಸ್ಥಾನ ಮತ್ತಷ್ಟು ಕುಸಿದಿದೆ; ತಂಡವು ಈಗ ಶೇ 4.63 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ' ಎಂದು ಐಸಿಸಿ ತಿಳಿಸಿದೆ.
'ಕನಿಷ್ಠ ಓವರ್-ರೇಟ್ ಉಲ್ಲಂಘನೆಗಳಿಗೆ ಸಂಬಂಧಿಸಿದ ಐಸಿಸಿ ನೀಚಿ ಸಂಹಿತೆಯ (Code of Conduct) ವಿಧಿ 2.22ರ ಪ್ರಕಾರ, ನಿಗದಿತ ಸಮಯದಲ್ಲಿ ತಮ್ಮ ತಂಡವು ಬೌಲ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಆಟಗಾರರಿಗೆ ಅವರ ಪಂದ್ಯದ ಶುಲ್ಕದ ಶೇ 5ರಷ್ಟು ದಂಡ ವಿಧಿಸಲಾಗುತ್ತದೆ; ಈ ದಂಡವು ಗರಿಷ್ಠವಾಗಿ ಪಂದ್ಯದ ಶುಲ್ಕದ ಶೇ 50 ರಷ್ಟಕ್ಕೆ ಸೀಮಿತವಾಗಿರುತ್ತದೆ. ಇದರ ಜೊತೆಗೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಆಟದ ನಿಯಮಗಳ ವಿಧಿ 16.11.2 ರ ಪ್ರಕಾರ, ನಿಗದಿತ ಸಂಖ್ಯೆಗಿಂತ ಕಡಿಮೆ ಇರುವ ಪ್ರತಿ ಓವರ್‌ಗೆ ತಂಡವೊಂದಕ್ಕೆ ಒಂದು ಅಂಕದ ದಂಡ ವಿಧಿಸಲಾಗುತ್ತದೆ. ಪರಿಣಾಮವಾಗಿ, ಪಾಕಿಸ್ತಾನದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳಿಂದ 11 ಅಂಕಗಳನ್ನು ಕಡಿತಗೊಳಿಸಲಾಗಿದೆ' ಎಂದು ಐಸಿಸಿ ತಿಳಿಸಿದೆ.
WTC ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿ (ಒಂಬತ್ತನೇ ಸ್ಥಾನ) ಪರದಾಡುತ್ತಿರುವ ಪಾಕಿಸ್ತಾನವು, ಇಲ್ಲಿಯವರೆಗೆ ಆಡಿರುವ ಒಂಬತ್ತು ಟೆಸ್ಟ್ ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಮತ್ತು ಏಳು ಸೋಲುಗಳನ್ನು ಕಂಡಿದೆ.
ತನ್ನ ಮುಂದಿನ WTC ಸರಣಿಯ ಭಾಗವಾಗಿ, ಪಾಕಿಸ್ತಾನವು ನವೆಂಬರ್‌ನಲ್ಲಿ ರಾವಲ್ಪಿಂಡಿ ಮತ್ತು ಲಾಹೋರ್‌ನಲ್ಲಿ ಶ್ರೀಲಂಕಾ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಯೋಜಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



