ಕ್ರಿಕೆಟ್

1st ODI: ಕೊಹ್ಲಿ, ಗಿಲ್ ಸಿಡಿಲಬ್ಬರದ ಶತಕ; ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ!

ನಾಯಕ ಶುಭಮನ್ ಗಿಲ್ ಶತಕ, ರೋಹಿತ್ ಶರ್ಮಾ ದಿಟ್ಟ ಆರಂಭ, ರುತುರಾಜ್ ಗಾಯಕ್ವಾಡ್ ಅಜೇಯ ಆಟದ ಬೆಂಬಲ; 3 ಪಂದ್ಯಗಳ ಸರಣಿಯಲ್ಲಿ ಭಾರತಕ್ಕೆ 1-0 ಮುನ್ನಡೆ

1st ODI: ಕೊಹ್ಲಿ, ಗಿಲ್ ಸಿಡಿಲಬ್ಬರದ ಶತಕ; ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ!
ವಿರಾಟ್ ಕೊಹ್ಲಿ-ಶುಭ್ ಮನ್ ಗಿಲ್ ಸ್ಫೋಟಕ ಬ್ಯಾಟಿಂಗ್
Published On :

ತಿರುವನಂತಪುರಂ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಕೇರಳದ ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಮೈದಾನದಲ್ಲಿ ಇಂದು ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ ನೀಡಿದ್ದ 296 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ಕೇವಲ 41.4 ಓವರ್ ನಲ್ಲೇ 2 ವಿಕೆಟ್ ಕಳೆದುಕೊಂಡು 300 ರನ್ ಪೇರಿಸಿ 8 ವಿಕೆಟ್ ಅಂತರದಲ್ಲಿ ಭರ್ಜರಿ ಜಯಬೇರಿ ಭಾರಿಸಿತು.

ಭಾರತದ ಪರ ನಾಯಕ ಶುಭಮನ್ ಗಿಲ್ (110) ಮತ್ತು ವಿರಾಟ್ ಕೊಹ್ಲಿ (ಅಜೇಯ 139) ಶತಕಗಳ ನೆರವಿನಿಂದ ಭಾರತ ಭರ್ಜರಿ ಜಯ ಸಾಧಿಸಿತು.

ಭರ್ಜರಿ ಆರಂಭ

296 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡಕ್ಕೆ ನಾಯಕ ಶುಭ್ ಮನ್ ಗಿಲ್ ಮತ್ತು ರೋಹಿತ್ ಶರ್ಮಾ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಈ ಜೋಡಿ 74 ರನ್ ಗಳ ಜೊತೆಯಾಟ ಕಲೆಹಾಕಿತು. ರೋಹಿತ್ ಶರ್ಮಾ 3 ಸಿಕ್ಸರ್ ಮತ್ತು 2 ಬೌಂಡರಿ ಸಹಿತ 32 ರನ್ ಕಲೆಹಾಕಿ ಔಟಾದರು.

ಕೊಹ್ಲಿ-ಗಿಲ್ ಜುಗಲ್ ಬಂದಿ

ರೋಹಿತ್ ಶರ್ಮಾ ಔಟಾದ ಬಳಿಕ ಕ್ರೀಸ್ ಗೆ ಬಂದ ವಿರಾಟ್ ಕೊಹ್ಲಿ ನಾಯಕ ಶುಭ್ ಮನ್ ಗಿಲ್ ಜೊತೆಗೂಡಿ ಭಾರತದ ಇನ್ನಿಂಗ್ಸ್ ಗೆ ವೇಗ ನೀಡಿದರು. ಇನ್ನಿಂಗ್ಸ್ ಯಾವುದೇ ಹಂತದಲ್ಲೂ ರನ್ ರೇಟ್ ವೇಗ ಕುಸಿಯದಂತೆ ನೋಡಿಕೊಂಡರು.

ಗಿಲ್ 108 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 13 ಬೌಂಡರಿ ಸಹಿತ 110 ರನ್ ಕಲೆಹಾಕಿದರು. ಅವರಿಗೆ ಉತ್ತಮ ಸಾಥ್ ನೀಡಿದ ವಿರಾಟ್ ಕೊಹ್ಲಿ 88 ಎಸೆತಗಳಲ್ಲಿ 9 ಸಿಕ್ಸರ್ ಗಳು ಮತ್ತು 10 ಬೌಂಡರಿಗಳ ಸಹಿತ ಅಜೇಯ 139 ರನ್ ಕಲೆಹಾಕಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ನಾಯಕ ಗಿಲ್ ಔಟಾದ ಬಳಿಕ ಕ್ರೀಸ್ ಗೆ ಬಂದ ರುತುರಾಜ್ ಗಾಯಕ್ವಾಡ್ 19 ಎಸೆತಗಳಲ್ಲಿ ಅಜೇಯ 13 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಕ್ತಾಯಗೊಳಿಸಿದರು.

ಈ ಗೆಲುವಿನೊಂದಿಗೆ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.