ಒಂದೇ ದಿನ ಆರು ಭರ್ಜರಿ ಶತಕ: ಕ್ರಿಕೆಟ್ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಾಖಲೆ!
ಭಾನುವಾರ, ನಡೆದ ಮೂರೂ ಏಕದಿನ ಪಂದ್ಯಗಳಲ್ಲಿ ಒಟ್ಟು 6 ಶತಕಗಳು ದಾಖಲಾಗಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯಾಗಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ, ಏಕದಿನ ಕ್ರಿಕೆಟ್ ನಲ್ಲಿ ಒಂದೇ ದಿನ ಆರು ಶತಕಗಳು ದಾಖಲಾಗಿವೆ!
ಭಾನುವಾರ, ನಡೆದ ಮೂರೂ ಏಕದಿನ ಪಂದ್ಯಗಳಲ್ಲಿ ಒಟ್ಟು 6 ಶತಕಗಳು ದಾಖಲಾಗಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯಾಗಿದೆ.
ತಿರುವನಂತಪುರದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯ, ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಹಾಗೂ ಲಂಡನ್‌ನ 'ದಿ ಓವಲ್'ನಲ್ಲಿ ನಡೆದ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಪಂದ್ಯಗಳಲ್ಲಿ ಈ ದಾಖಲೆ ಸೃಷ್ಟಿಯಾಗಿದೆ.
ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಜಸ್ಟಿನ್ ಗ್ರೀವ್ಸ್, ಟೆಂಬಾ ಬವುಮಾ, ಡೇವಿಡ್ ಮಿಲ್ಲರ್ ಮತ್ತು ಟಾಮ್ ಬ್ಯಾಂಟನ್ ಅವರು ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದೇ ದಿನ ಆರು ಶತಕಗಳನ್ನು ದಾಖಲಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ವಿರಾಟ್ ಕೊಹ್ಲಿ
ತಿರುವನಂತಪುರದ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 139 ರನ್ ಬಾರಿಸಿದ್ದಾರೆ. ಈ ಭರ್ಜರಿ ಇನ್ನಿಂಗ್ಸ್ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 15,000 ರನ್ ಪೂರೈಸಿದ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಶುಭ್ಮನ್ ಗಿಲ್
ತಿರುವನಂತಪುರದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ 110 ರನ್ಗಳ ಅಮೋಘ ಇನಿಂಗ್ಸ್ ಆಡಿದ್ದಾರೆ.
ಡೇವಿಡ್ ಮಿಲ್ಲರ್
ಜೋಹಾನ್ಸ್ಬರ್ಗ್ನ ವಾಂಡರರ್ಸ್ ಸ್ಡೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಅವರು ಕೇವಲ 76 ಎಸೆತಗಳಲ್ಲಿ 142 ರನ್ ಚಚ್ಚಿ ಅಬ್ಬರಿಸಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾ ತಂಡದ ಗೆಲುವಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರವಹಿಸಿದ್ದಾರೆ.
ಟಾಮ್ ಬ್ಯಾಂಟನ್
ಶ್ರೀಲಂಕಾ ವಿರುದ್ಧ ಲಂಡನ್‌ನ ದಿ ಓವಲ್ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ದಾಂಡಿಗ ಟಾಮ್ ಬ್ಯಾಂಟನ್ 126 ರನ್ ಬಾರಿಸಿದ್ದಾರೆ. ಇದು ಬ್ಯಾಂಟನ್ ಅವರ ಚೊಚ್ಚಲ ಏಕದಿನ ಶತಕ ಎಂಬುದು ವಿಶೇಷ.
ತೆಂಬಾ ಬವುಮಾ
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೌತ್ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ 103 ರನ್ಗಳನ್ನು ಬಾರಿಸಿ ಮಿಂಚಿದ್ದಾರೆ.
ಜಸ್ಟಿನ್ ಗ್ರೀವ್ಸ್
ತಿರುವನಂತಪುರದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಜಸ್ಟಿನ್ ಗ್ರೀವ್ಸ್ 101 ರನ್ಗಳ ಭರ್ಜರಿ ಸೆಂಚುರಿ ಬಾರಿಸಿದ್ದಾರೆ. ಗ್ರೀವ್ಸ್ ಅವರ ಈ ಶತಕದ ನೆರವಿನಿಂದ ವಿಂಡೀಸ್ ತಂಡವು ಈ ಪಂದ್ಯದಲ್ಲಿ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



