ಕ್ರಿಕೆಟ್

ODI Rankings: 55ನೇ ಶತಕದ ಬೆನ್ನಲ್ಲೇ 2ನೇ ಸ್ಥಾನಕ್ಕೇರಿದ 'ಕಿಂಗ್' ಕೊಹ್ಲಿ; ಅಗ್ರ ಸ್ಥಾನಕ್ಕೆ ಗಿಲ್ ಜತೆ ಫೈಟ್!

ಇತ್ತೀಚಿಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 139 ರನ್ ಗಳಿಸುವ ಮೂಲಕ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.

ODI Rankings: 55ನೇ ಶತಕದ ಬೆನ್ನಲ್ಲೇ 2ನೇ ಸ್ಥಾನಕ್ಕೇರಿದ 'ಕಿಂಗ್' ಕೊಹ್ಲಿ; ಅಗ್ರ ಸ್ಥಾನಕ್ಕೆ ಗಿಲ್ ಜತೆ ಫೈಟ್!
ವಿರಾಟ್ ಕೊಹ್ಲಿ
Published On :

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಇತ್ತೀಚಿಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 139 ರನ್ ಗಳಿಸುವ ಮೂಲಕ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.

ಕೊಹ್ಲಿ ಅವರ ಈ 55ನೇ ಏಕದಿನ ಶತಕ ಮತ್ತು 86ನೇ ಅಂತರರಾಷ್ಟ್ರೀಯ ಶತಕವು ಅವರಿಗೆ 796 ರೇಟಿಂಗ್ ಅಂಕಗಳನ್ನು ಗಳಿಸಿಕೊಟ್ಟಿದ್ದು, ಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಿದ್ದಾರೆ.

ಇನ್ನು ಟೀಮ್​ ಇಂಡಿಯಾ ಏಕದಿನ ತಂಡದ ನಾಯಕ ಶುಭಮಾನ್ ಗಿಲ್ ಅವರು 816 ರೇಟಿಂಗ್ ಅಂಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ನಾಯಕ ಮತ್ತು ಮಾಜಿ ನಾಯಕರ ಮಧ್ಯೆಯೇ ಭಾರೀ ಪೈಪೋಟಿ ಏರ್ಪಟ್ಟಿದೆ.

ಮತ್ತೊಬ್ಬ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರು 719 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. . ನ್ಯೂಜಿಲೆಂಡ್‌ನ ಡೆರಿಲ್ ಮಿಚೆಲ್ 794 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದು, ಶ್ರೇಯಾಂಕದ ಮೊದಲ ಮೂರೂ ಸ್ಥಾನಗಳನ್ನು ಭಾರತೀಯರೇ ಆಕ್ರಮಿಸುವುದನ್ನು ತಡೆದಿದ್ದಾರೆ. ಶ್ರೇಯಸ್ ಅಯ್ಯರ್ ಅವರು 14ನೇ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ ಅವರು 17ನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ರ್‍ಯಾಂಕಿಂಗ್

ಬೌಲರ್‌ಗಳ ರ್‍ಯಾಂಕಿಂಗ್​ನಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ 2/54 ಮತ್ತು 4/20 ವಿಕೆಟ್ ಸಾಧನೆ ಮಾಡಿದ ದಕ್ಷಿಣ ಆಫ್ರಿಕಾದ ಪ್ರಮುಖ ಸ್ಪಿನ್ನರ್ ಕೇಶವ್ ಮಹಾರಾಜ್ ಮೂರನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾದ ವೇಗಿ ಜೋಶ್ ಹೇಝಲ್‌ವುಡ್ ಕೂಡ ಮೊದಲ ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್ ಕಬಳಿಸುವ ಮೂಲಕ ಟಾಪ್ 10 ಶ್ರೇಯಾಂಕಕ್ಕೆ ಮರಳಿದ್ದು, ಐದು ಸ್ಥಾನ ಜಿಗಿದು 10 ನೇ ಸ್ಥಾನದಲ್ಲಿದ್ದಾರೆ.

ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 40 ರನ್ ನೀಡಿ 4 ವಿಕೆಟ್ ಕಬಳಿಸಿದ್ದ ಭಾರತದ ಸ್ಪಿನ್ನರ್ ಕುಲದೀಪ್ ಯಾದವ್ ಅವರು 623 ರೇಟಿಂಗ್ ಅಂಕಗಳೊಂದಿಗೆ 4 ಸ್ಥಾನಗಳಷ್ಟು ಮೇಲೇರಿ 5ನೇ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.