ಜಿಲ್ಲಾ ಸುದ್ದಿ

ಅನ್ನಪೂರ್ಣ ವರದಿ ಜಾರಿಗೆ ಆಗ್ರಹ

Published On :

ಬೆಂಗಳೂರು: ಮಡಿವಾಳದವರನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಶಿಫಾರಸ್ಸು ಮಾಡಿದ್ದ ಅನ್ನಪೂರ್ಣ ವರದಿಯನ್ನು ಕೂಡಲೇ ಜಾರಿ ಮಾಡುವಂತೆ ಅಖಿಲ ಕರ್ನಾಟಕ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.

ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ್ ಅವರು, ಸ್ವಾತಂತ್ಯ ಬಂದು 67 ವರ್ಷ ಕಳೆಯುತ್ತಿದ್ದರೂ ಮಡಿವಾಳ ಸಮುದಾಯಕ್ಕೆ ಸೇರಿದ ಜನ ಇಂದಿಗೂ ಹಿಂದುಳಿದ ಜನರಾಗಿದ್ದಾರೆ. ಅವರು ಶೈಕ್ಷಣಿಕವಾಗಿ ಮುಂದುವರೆಯಬೇಕಾಗಿದ್ದು, ಮಡಿವಾಳದ ಜನರ ಸ್ಥಿತಿಯನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಬಿಜೆಪಿ ಸರ್ಕಾರ ಮೈಸೂರು ವಿಶ್ವವಿದ್ಯಾಲಯ ಮಾನವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಅನ್ನಪೂರ್ಣ ನೇಮಿಸಿತ್ತು.

ಅನ್ನಪೂರ್ಣ ಸಲ್ಲಿಸಿದ ವರದಿ ಪ್ರಸ್ತುತ ಸಚಿವ ಸಂಪುಟದಲ್ಲಿದ್ದು, ವರದಿಯನ್ನು ಅನುಮೋದಿಸಿ ಕೇಂದ್ರಸರ್ಕಾರಕ್ಕೆ ಕಳುಹಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಸರ್ಕಾರದ ಗಮನಕ್ಕೆ ತರಲೆಂದು ಆಗಸ್ಟ್ 26 ಬೆಳಿಗ್ಗೆ 10 ಗಂಟೆಗೆ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರು ಸೇರಿದಂತೆ ಮತ್ತಿತರ ಗಣ್ಯಾತಿ ಗಣ್ಯರು ಉಪಸ್ಥಿತತೆಯನ್ನು ವಹಿಸಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.