ಜಿಲ್ಲಾ ಸುದ್ದಿ

ಕೆಪಿಎಸ್‌ಸಿ ತಿಂಗಳ ಹೋರಾಟ ಅಂತ್ಯ

2011ರ ಕೆಪಿಎಸ್‌ಸಿ ಅಭ್ಯರ್ಥಿಗಳ ಆಯ್ಕೆಪಟ್ಟಿ ರದ್ದು ಆದೇಶ ಹಿಂಪಡೆಯುವಂತೆ ಆಗ್ರಹಿಸಿ...

ಕೆಪಿಎಸ್‌ಸಿ ತಿಂಗಳ ಹೋರಾಟ ಅಂತ್ಯ
Published On :

ಬೆಂಗಳೂರು: 2011ರ ಕೆಪಿಎಸ್‌ಸಿ ಅಭ್ಯರ್ಥಿಗಳ ಆಯ್ಕೆಪಟ್ಟಿ ರದ್ದು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕಳೆದ 32 ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೆಪಿಎಸ್‌ಸಿ ಪ್ರೊಬೆಷನರಿ ಅಭ್ಯರ್ಥಿಗಳ ಪ್ರತಿಭಟನೆ ಬುಧವಾರ ಅಂತ್ಯವಾಗಿದ್ದು, ವಾರದಲ್ಲಿ ನ್ಯಾಯಾಲಯದ ಮೆಟ್ಟಿಲೇರಲಾಗುವುದು ಹಾಗೂ ಕಾನೂನು ಮಟ್ಟದಲ್ಲಿ ದೊಡ್ಡ ಹೋರಾಟ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಪ್ರತಿಭಟನಾಕಾರರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಇದು ಕೊನೆಯ ಎಚ್ಚರಿಕೆ. ಇನ್ನಾದರೂ ತಾವು ಮಾಡಿರುವ ತಪ್ಪನ್ನು ಅರಿತು ಆದೇಶ ಹಿಂಪಡೆಯದಿದ್ದಲ್ಲಿ ನ್ಯಾಯಾಲಯದ ಮೆಟ್ಟಿಲೇರುವುದು ಖಚಿತ. ಅದಕ್ಕಾಗಿ ಅಗತ್ಯ ಸಿದ್ಧತೆ ನಡೆಸಲಾಗುತ್ತಿದೆ. ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಹಾಗಾಗಿ ವಕೀಲರ ಸಲಹೆ ಪಡೆದು, ಹೋರಾಟ ನಡೆಸಲಾಗುವುದು. ಕೆಎಟಿಯಲ್ಲಿ ಇಂತಹ ಪ್ರಕರಣಗಳ ಇತ್ಯರ್ಥ ಕಷ್ಟ ಎಂಬ ಅಭಿಪ್ರಾಯ ಕೇಳಿಬರುತ್ತಿದೆ. ಹಾಗಾಗಿ ಹಲವು ವಕೀಲ ಸಲಹೆ ಪಡೆದು ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಹೇಳಿದರು.

ಈ ಅಭ್ಯರ್ಥಿಗಳಿಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ. ಒಂದೇ ಬಾರಿ ಇವರಿಗೆ ನ್ಯಾಯ ಸಿಗಬೇಕಿದೆ. ಆ ನಿಟ್ಟಿನಲ್ಲಿ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಹಾಗಾಗಿ ಮುಂಬರುವ ಮತ್ತೊಂದು ಪರೀಕ್ಷೆಗೆ ಈ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದರು.

ಕಾನೂನು ಇಲಾಖೆ ನೀಡಿರುವ ಅಭಿಪ್ರಾಯವನ್ನು ಧಿಕ್ಕರಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ತಪ್ಪಿಸಿಕೊಳ್ಳಲು ವಾಮ ಮಾರ್ಗ ಹುಡುಕುತ್ತಿದೆ. ನ್ಯಾಯಾಲಯದ ಮುಂದೆ ವಾಮಮಾರ್ಗವೂ ಪ್ರಯೋಜನವಾಗುವುದಿಲ್ಲ. ಪ್ರಕರಣದ ಸಿಐಡಿ ತನಿಖೆ ವರದಿ ಬಂದರೆ ದೂರು ನೀಡಿರುವವರೇ ಮೊದಲು ಜೈಲಿಗೆ ಹೋಗಬೇಕಾಗುತ್ತದೆ. ಆಗಿರುವ ತಪ್ಪನ್ನು ಸರಿಪಡಿಸಿಕೊಂಡರೆ ಇರುವ ಗೌರವ ಉಳಿಯುತ್ತದೆ. ಇಲ್ಲವಾದಲ್ಲಿ ಜೈಲು ಖಚಿತ. ಕೊನೆಪಕ್ಷ ಮೌಖಿಕ ಪರೀಕ್ಷೆಯಲ್ಲಿ 150 ಅಂಕ ಪಡೆದವರ ವಿರುದ್ಧ ತನಿಖೆಯಾಗಲಿ ಉಳಿದವರಿಗೆ ಕೆಲಸ ಕೊಡಿ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.