ಮೊರಾರ್ಜಿ ಶಾಲೆ ಊಟದಲ್ಲಿ ಕಪ್ಪೆ ಕಾಲು
ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನದ ಊಟದಲ್ಲಿ ಸತ್ತ ಕಪ್ಪೆ ...

ಆಳಂದ: ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನದ ಊಟದಲ್ಲಿ ಸತ್ತ ಕಪ್ಪೆ ಕಾಲುಗಳು ದೊರೆತ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಊಟವನ್ನು ಬಹಿಷ್ಕರಿಸಿದ್ದಾರೆ.
ಊಟಕ್ಕೆ ಕುಳಿತಿದ್ದ ವಿದ್ಯಾರ್ಥಿಗಳಿಗೆ ಅನ್ನ ಬಡಿಸಿದ ಮೇಲೆ ಕಪ್ಪೆಯ ಕಾಲುಗಳು ದೊರೆತಿವೆ. ಅನ್ನದ ಪಾತ್ರೆಯಲ್ಲೇ ಕಪ್ಪೆ ಸತ್ತಿದೆ ಎಂದು ಗೊತ್ತಾದ ಮೇಲೆ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಸ್ವಸ್ಥಗೊಂಡ 15 ವಿದ್ಯಾರ್ಥಿಗಳಿಗೆ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಸುದ್ದಿ ಅರಿತು ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ಟಿ. ರಾಠೋಡ್ ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ಆಗಮಿಸಿದ್ದ ಜಿಪಂ ಸದಸ್ಯ ಹರ್ಷಾನಂದ ಗುತ್ತೇದಾರ, ತಾಪಂ ಸದಸ್ಯ ಮಲ್ಲಿನಾಥ ಜಮಾದಾರ ಅಲ್ಲದೆ, ಗ್ರಾಪಂ ಸದಸ್ಯರು ಭೇಟಿ ನೀಡಿ ಅಡುಗೆ ಸಿಬ್ಬಂದಿ ಮತ್ತು ಶಾಲೆಯ ಮುಖ್ಯಸ್ಥರ ನಿಷ್ಕಾಳಜಿಯೇ ಇದಕ್ಕೆ ಕಾರಣವಾಗಿದೆ. ಮುಂದೆ ಇಂತಹ ಘಟನೆ ಆಗದಂತೆ ಎಚ್ಚರ ವಹಿಸಬೇಕೆಂದು ಅವರು ತಾಕೀತು ಮಾಡಿದ್ದಾರೆ.
ಕ್ರಮಕ್ಕೆ ಒತ್ತಾಯ: ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಆಗಾಗ ಇಂಥ ಪ್ರಕರಣ ನಡೆಯುತ್ತಿವೆ. ಮೇಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಕುರಿತು ಗಮನ ಹರಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಸ್ವಚ್ಛ ಊಟ ನೀಡಬೇಕೆಂದು ಸಾವಯವ ಕೃಷಿ ಪರಿವಾರದ ತಾಲೂಕು ಅಧ್ಯಕ್ಷ ಬಸವರಾಜ ಪವಾಡಶೆಟ್ಟಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


