ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಕುಸುಗಲ್(ಹುಬ್ಬಳಿ): ಪ್ರೀತಿಯ ಸೆಳೆತಕ್ಕೆ ಬಿದ್ದಿದ್ದ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ...!
ಶಿರಸಿ ಮೂಲದ 18 ವರ್ಷದ ರಾಘು ಹನುಮಂತಪ್ಪ ಬೋವಿ ಹಾಗೂ 18 ವರ್ಷದ ಮಮತಾ ಕಲಭಾಗ್ ಪ್ರೇಮಿಗಳು ನಿನ್ನೆ ಹುಬ್ಬಳಿ ಹೊರವಲಯದ ಕುಸುಗಲ್ ರಸ್ತೆ ಬಳಿ ನಿರ್ಜನ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ರಾಘು ಜತೆ ಮಮತಾ ಕಲಭಾಗ್‌ಗೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ.
ಈ ಇಬ್ಬರು ಪ್ರೀತಿ ವಿಷಯ ಮನೆಯಲ್ಲಿ ತಿಳಿದು ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಮನೆಯಿಂದ ಓಡಿ ಬಂದು ಹುಬ್ಬಳಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಕೇಶ್ವಾಪುರ ಠಾಣೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


