ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ತೆಲಗು ನಟಿ ಸಹೋದರ ಆತ್ಮಹತ್ಯೆ

ತೆಲುಗು ನಟಿ ಕ್ಯಾಥರಿನ್ ಥೇಸ್ರಾ ಅವರ ಸಹೋದರ ಆತ್ಮಹತ್ಯೆ ಮಾಡಿಕೊಂಡಿರುವ...

ಬೆಂಗಳೂರಿನಲ್ಲಿ ತೆಲಗು ನಟಿ ಸಹೋದರ ಆತ್ಮಹತ್ಯೆ
Published On :

ಬೆಂಗಳೂರು: ತೆಲುಗು ನಟಿ ಕ್ಯಾಥರಿನ್ ತ್ರೆಸ ಅವರ ಸಹೋದರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಬಿಎಂ ವಿದ್ಯಾರ್ಥಿ ಕ್ರಿಸ್ಟೋಫರ್ ಅಲೆಕ್ಸಾಂಡರ್(19) ಆತ್ಮಹತ್ಯೆಗೆ ಶರಣಾದ ಯುವಕ. ಕೇರಳ ಮೂಲದ ಕ್ರಿಸ್ಟೋಫರ್ ಅಲೆಕ್ಸಾಂಡರ್ ಡಿ.11ರಂದು ಭವಾನಿನಗರದಲ್ಲಿರುವ ಸೆಮಿನರಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಯಾನಂದ ಸಾಗರ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ಕ್ರಿಸ್ಟೋಫರ್ ಗುರುವಾರ ಬೆಳಗ್ಗೆ 9 ಗಂಟೆಯ ನಂತರ ಸೆಮಿನರಿಯ ರೂಂನಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ಸಿಬ್ಬಂದಿ ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕ್ರಿಸ್ಟೋಫರ್ ತಾಯಿ ಬೆಂಗಳೂರಿನಲ್ಲಿಯೇ ವಾಸವಾಗಿದ್ದು, ಮಗನನ್ನು ಸೆಮಿನರಿಗೆ ಸೇರಿಸಿದ್ದರು. ಕ್ರಿಸ್ಟೋಫರ್ ರೂಂನಲ್ಲಿ ಡೆತ್‌ನೋಟ್ ಸಿಕ್ಕಿದ್ದು, ಆತ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತ ಯುವಕ ತೆಲುಗಿನ ಖ್ಯಾತ ನಟಿ ಕ್ಯಾಥರಿನ್ ತ್ರೆಸ ಅವರ ಸಹೋದರನಾಗಿದ್ದಾನೆ. ಕ್ಯಾಥರಿನ್ ಥೇಸ್ರಾ ತಂದೆಯೊಂದಿಗೆ ಹೈದ್ರಾಬಾದ್‌ನಲ್ಲಿ ವಾಸವಾಗಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.