ಅಸಮರ್ಥ ಸಚಿವರನ್ನು ಕೈಬಿಡಿ
ಕಣ್ಣು, ಕಿವಿ ಇಲ್ಲದಂತಹ ಅಸಮರ್ಥ ಮಂತ್ರಿಗಳನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು...

ಬೆಳಗಾವಿ: ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಸಚಿವರನ್ನು ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಈ ಹಿಂದೆ ಕಾಂಗ್ರೆಸ್ ಶಾಸಕ ಮಲೀಕಯ್ಯ ಗುತ್ತೆದಾರ ಅವರೇ ಕಣ್ಣು, ಕಿವಿ ಇಲ್ಲದಂತಹ ಅಸಮರ್ಥ 10 ರಿಂದ 14 ಮಂತ್ರಿಗಳು ಸರ್ಕಾರದಲ್ಲಿದ್ದು, ಅವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದರು. ನಾನೂ ಕೂಡ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಸಚಿವರನ್ನು ಕೈಬಿಡುವಂತೆ ಮುಖ್ಯಮಂತ್ರಿಗಳಲ್ಲಿ ಆಗ್ರಹಿಸುತ್ತೇನೆ ಎಂದು ಹೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಬಗ್ಗೆ ಸರ್ಕಾರಕ್ಕೆ ಗಂಭೀರತೆಯಿಲ್ಲ. ಕಾಟಾಚಾರದ ಅಧಿವೇಶನ ನಡೆಸುತ್ತಿದ್ದಾರೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ ಶೆಟ್ಟರ್, ಅಧಿವೇಶನದ ಉಭಯ ಸದನದಲ್ಲಿ ಶಾಸಕರ ಗೈರು ಹಾಜರಾತಿ ಹೆಚ್ಚಾಗುತ್ತಿರುವುದು ಸರಿಯಲ್ಲ.
ಸದನದ ಚರ್ಚೆಯಲ್ಲಿ ಎಲ್ಲ ಪಕ್ಷದ ಶಾಸಕರು ಹಾಜರಿರಬೇಕು. ಇದರಿಂದ ಸದನಕ್ಕೆ ಗೌರವ ನೀಡಿದಂತಾಗುತ್ತದೆ. ಬಿಜೆಪಿ ಶಾಸಕರಿಗೂ ಸದನಕ್ಕೆ ಹಾಜರಿರುವಂತೆ ಸೂಚಿಸುತ್ತೇನೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಲು ಎರಡು ದಿನಗಳು ಸಾಲುವುದಿಲ್ಲ. ಈಗ ನೀಡುವ ಅವಧಿಯನ್ನು ನಾವು ಮೊದಲು ಸರಿಯಾಗಿ ಉಪಯೋಗಿಸಿಕೊಳ್ಳೋಣ. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲು ಕಾಲಾವಕಾಶ ನೀಡುವಂತೆ ಸ್ಪೀಕರ್ ಅವರಲ್ಲಿ ಮನವಿ ಮಾಡಿಕೊಳ್ಳುವೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿಗೆ ನನ್ನ ಬೆಂಬಲವಿಲ್ಲ. ಆದರೆ, ಉತ್ತರ ಕರ್ನಾಟಕದ ಅಭಿವೃದ್ದಿಗೆ ಹೋರಾಟ ನಡೆಸುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


