ರೌಡಿ ಶೀಟರ್ ರವಿ ಬರ್ಬರ ಹತ್ಯೆ

ಬೆಂಗಳೂರು: ನಗರದ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕೊಲೆಗೀಡಾದ ರೌಡಿ ಶೀಟರ್‌ನನ್ನು 24 ವರ್ಷದ ರವಿ ಎಂದು ಗುರುತಿಸಲಾಗಿದ್ದು ಆತನ ಎದೆ ಹಾಗೂ ಬೆನ್ನೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಈತನ ವಿರುದ್ಧ ನಗರದ ಹಲವು ಠಾಣೆಗಳಲ್ಲಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕ್ರಿಮಿನಲ್ ದೂರುಗಳು ದಾಖಲಾಗಿವೆ.
ಅಲ್ಲದೆ ಈತನ ಬದ್ಧ ವೈರಿಯಾಗಿದ್ದ ಪಳನಿ ಹತ್ಯೆಯಲ್ಲಿ ಈತನ ಕೈವಾಡವಿದೆ ಎಂಬ ಕಾರಣದಿಂದ ಈತನನ್ನು ಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


