ಗೌಪ್ಯ ಸ್ಥಳದಲ್ಲಿ ಪಾಲಕರೊಂದಿಗೆ ಮೆಹ್ದಿ ಮಾತುಕತೆಗೆ ಅವಕಾಶ

ಬೆಂಗಳೂರು: ಇಸಿಸ್ ಸಂಘಟನೆ ಟ್ವಿಟರ್ ಅಕೌಂಟ್ ನಿರ್ವಹಿಸುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ಮೆಹ್ದಿ ಮಸ್ರೂರ್ ಬಿಸ್ವಾಸ್‌ನ ಪಾಲಕರು ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಅವರನ್ನು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮೆಹ್ದಿ ತಂದೆ ಮಿಖಾಯಿಲ್ ಬಿಸ್ವಾಸ್, ತಾಯಿ ಮುಮ್ತಾಜ್ ಬೇಂಗಂ ಆಯುಕ್ತರ ಕಚೇರಿಯಲ್ಲಿ ಕೆಲ ಹೊತ್ತು ಚರ್ಚೆ ನಡೆಸಿದರು. ಈ ವೇಳೆ ಪಾಲಕರು ಮಗನ ಹವ್ಯಾಸಗಳು, ಖಾಸಗಿ ವಿಚಾರಗಳು, ಚಟುವಟಿಕೆಗಳ ಬಗ್ಗೆ ಆಯುಕ್ತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ತನಿಖೆಯ ಭಾಗವಾಗಿ ಪಾಲಕರಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಾಗಿಲ್ಲ. ಪಾಲಕರು ತಾವಾಗಿಯೇ ಬಂದಿರುವುದರಿಂದ ಆಯುಕ್ತರ ಬಳಿ ತಮ್ಮ ಮಗ ಅಮಾಯಕ ಎಂದು ಹೇಳಿದ್ದಾರೆ ಎನ್ನಲಾಗಿದೆ. ಆಯುಕ್ತರು ಇಬ್ಬರಿಗೂ ಪ್ರಕರಣದ ಗಂಭೀರತೆ, ಆತನ ವಿರುದ್ಧ ಇರುವ ಆರೋಪಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಚರ್ಚೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಲು ಪಾಲಕರು ನಿರಾಕರಿಸಿ ಸ್ಥಳದಿಂದ ತೆರಳಿದರು. ಮಗನೊಂದಿಗೆ ಮಾತನಾಡಲು ಪಾಲಕರಿಗೆ ಗೌಪ್ಯ ಸ್ಥಳದಲ್ಲಿ ಅವಕಾಶ ನೀಡಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದೇ ವೇಳೆ ಮೆಹ್ದಿ ಟ್ವಿಟರ್, ಈ ಮೇಲ್‌ನಿಂದ ಸಂಗ್ರಹಿಸಲಾದ ಮಾಹಿತಿ ಪೈಕಿ ಹಲವು ಅರೆಬಿಕ್ ಭಾಷೆಯಲ್ಲಿವೆ. ಇಂಗ್ಲಿಷ್‌ಗೆ ಭಾಷಾಂತರಿಸಿ ಓದಿಕೊಳ್ಳಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿ.8ಕ್ಕೆ ಮೆಹ್ದಿ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ವಿಚಾರಣೆ ಅಗತ್ಯ ಇರುವುದರಿಂದ ಮತ್ತಷ್ಟು ದಿನ ವಶಕ್ಕೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


