ಬಿಬಿಎಂಪಿ ಅಧಿಕೃತ ಫೇಸ್‌ಬುಕ್ ಅಕೌಂಟ್‌ಗೆ ಮೇಯರ್ ಚಾಲನೆ
ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಹೊಸ ಯೋಜನೆ...

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಫೇಸ್ ಬುಕ್ ಅಕೌಂಟ್ ತೆರೆಯುವ ಮೂಲಕ ಹೊಸ ಯೋಜನೆಯನ್ನು ಕೈಗೊಂಡಿದೆ. ಬಿಬಿಎಂಪಿಯ ಅಧಿಕೃತ ಫೇಸ್‌ಬುಕ್ ಅಕೌಂಟ್‌ಗೆ ಮೇಯರ್ ಶಾಂತಕುಮಾರಿ ಬಿಬಿಎಂಪಿ ಕಚೇರಿಯಲ್ಲಿ ಚಾಲನೆ ನೀಡಿದರು.
ಜನರ ಸಮಸ್ಯೆಗಳಿಗೆ ಬಿಬಿಎಂಪಿ ನೇರವಾಗಿ ಸ್ಪಂಧಿಸಲು ಈ ಹೊಸ ಪ್ಲಾನ್ ಕೈಗೊಂಡಿದೆ. ಈ ಮೂಲಕ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಫೇಸ್‌ಬುಕ್ ಮುಕಾಂತರ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಬಹುದು.
ಫೇಸ್‌ಬುಕ್‌ನ ಮೂಲಕ ಬಿಬಿಎಂಪಿ ತಮ್ಮ ದೂರು, ಸಮಸ್ಯೆ, ಮನವಿ ಇತ್ಯಾಧಿಗಳನ್ನು ಈ ಫೇಸ್‌ಬುಕ್ ಅಕೌಂಟ್‌ನಲ್ಲಿ ದಾಖಲಿಸಬಹುದು. ಈ ನೂತನ ಯೋಜನೆಯ ಮೂಲಕ ಸಮಸ್ಯೆಗಳ ಶೀಘ್ರ ಇತ್ಯರ್ಥ ಹಾಗೂ ಸಮಯ ವ್ಯರ್ಥವಾಗುವುದನ್ನು ತಡೆಯುವುದು ಬಿಬಿಎಂಪಿಯ ಮುಖ್ಯ ಉದ್ದೇಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


