ಬಿಎಂಟಿಸಿ ಬಸ್ ಅಪಘಾತ: ನಾಲ್ವರು ಸಾವು
ಬಿಎಂಟಿಸಿ ಬಸ್ ಬ್ರೇಕ್ ವಿಫಲವಾಗಿ ಸರಣಿ ಅಪಘಾತ...

ಬೆಂಗಳೂರು: ಬಿಎಂಟಿಸಿ ಬಸ್ ಬ್ರೇಕ್ ವಿಫಲವಾಗಿ ಒನ್‌ವೇಗಿ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಲಿಂಗರಾಜುಪರಂ ಬಳಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಶಿವಾಜಿನಗರದಿಂದ ಲಿಂಗಾರಾಜಪುರಂಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಲಿಂಗಾರಾಜಪುರಂ ಸಮೀಪ ಬ್ರೇಕ್ ಫೇಲ್ಯೂರ್ ಆಗಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಒನ್‌ನೇಗೆ ನುಗ್ಗಿದೆ. ಈ ವೇಳೆ ಗೂಡ್ಸ್ ಗಾಡಿಗೆ ವೇಗವಾಗಿ ಗುದ್ದಿದೆ. ಗೂಡ್ಸ್‌ಗಾಡಿಯ ಹಿಂದೆ ನಿಂತಿದ್ದ ಬೈಕ್‌ಗೆ ಗೂಡ್ಸ್ ಗಾಡಿ ಗುದ್ದಿಗೆ.
ಈ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದರು. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬರು ಸಾವನ್ನಪ್ಪಿದರು. ಈ ಮೂಲಕ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಘಟನೆಯಿಂದಾಗಿ ಲಿಂಗರಾಜಪುರಂ ಬಳಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


