ನಗರಕ್ಕೆ ಅಮಿತ್ ಶಾ ಭೇಟಿ ಜನವರಿ 3ಕ್ಕೆ
ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಜ. 3ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ...

ಶಿವಮೊಗ್ಗ : ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಜ. 3ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಬಗ್ಗೆ ರಾಜ್ಯದ ಎಲ್ಲ ನಾಯಕರು ಒಟ್ಟಾಗಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ. ಎಸ್.ಯಡಿಯೂರಪ್ಪ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಅವರು ವಾಜಪೇಯಿ ಜನ್ಮದಿನ ಪ್ರಯಕ್ತ ಯುವಮೋರ್ಚಾ ಆಯೋಜಿಸಿದ್ದ ರಕ್ತದಾನ ಕಾರ್ಯಕ್ರಮ ಉದ್ಘಾಟಿಸಿದ ಅವರು, ದೇಶದಲ್ಲಿ ಎಲ್ಲೇ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತಿದೆ. ಒಂದೊಂದೇ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತಿದೆ. ಅದೇ ರೀತಿ ಕರ್ನಾಟಕವನ್ನೂ ಸಹ ಕಾಂಗ್ರೆಸ್ ನಿಂದ ಮುಕ್ತಗೊಳಿಸಲು ಕಾರ್ಯಕರ್ತರು ಒಗ್ಗೂಡಬೇಕು. ಸಂಘಟನೆ ಬಲಪಡಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೇಲಿಂದ ಮೇಲೆ ಜನವಿರೋಧಿ ನಿಲುವು ತಳೆಯುತ್ತಿದೆ. ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಹೀಗಾಗಿ ಬಿಜೆಪಿಯನ್ನು ಬೇಗನೆ ಅಸ್ತಿತ್ವಕ್ಕೆ ತರಲು ನಾವೆಲ್ಲಾ ದುಡಿಯಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


