ಜಿಲ್ಲಾ ಸುದ್ದಿ

ಆಕ್ಸ್‌ಫರ್ಡ್ ವಿವಿ ಸಹಯೋಗದಲ್ಲಿ ಅಧ್ಯಯನ ಪೀಠ ಸ್ಥಾಪನೆ

Published On :

ಬೆಂಗಳೂರು: ರಾಜ್ಯ ಸರ್ಕಾರ ಇಂಗ್ಲೆಂಡ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಖ್ಯಾತ ಸಮಾಜಶಾಸ್ತ್ರಜ್ಞ ಪ್ರೊ. ಎಂ.ಎನ್.ಶ್ರೀನಿವಾಸ್ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಹಾಗೂ ದತ್ತಿ ಕೇಂದ್ರ ಸ್ಥಾಪನೆಗೆ ಮುಂದಾಗಿದೆ.

ಆಕ್ಸ್‌ಫರ್ಡ್ ವಿವಿ ಕುಲಪತಿಯೊಂದಿಗೆ ಚರ್ಚಿಸಿದ ಬಳಿಕ ಆಕ್ಸ್‌ಫರ್ಡ್ ವಿವಿಯ ಸಹಯೋಗದಲ್ಲಿ ಪ್ರೊ.ಎಂ.ಎನ್.ಶ್ರೀನಿವಾಸ್ ಅಧ್ಯಯನ ಪೀಠ ಸ್ಥಾಪನೆಗೆ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಕುರಿತು ರೂಪುರೇಷೆ ರಚಿಸಲು ರಾಜ್ಯ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಡಾ.ಗೀತಾ ಬಾಲಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ.

ಈ ತಜ್ಞರ ಸಮಿತಿ ನೀಡುವ ಶಿಫಾರಸಿನ ಆಧಾರದಲ್ಲಿ ವಿಶೇಷ ದತ್ತಿ-ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.