ಮುಂದುವರೆದ 'ಆಪರೇಷನ್ ಟೈಗರ್'
'ಆಪರೇಷನ್ ಟೈಗರ್'ಗೆ ಸೋಲಿಗರು ಸಾಥ್...

ಬೆಳಗಾವಿ: ತಮ್ಮ ಪ್ರಾಣವನ್ನು ಕೈಯಲ್ಲಿಟ್ಟುಕೊಂಡು ಜೀವಿಸಬೇಕಾದ ಪರಿಸ್ಥಿತಿ ಎದುರಾಗಿದೆ ಖಾನಾಪುರದ ಜಾಂಬೋಟಿಯ ಗ್ರಾಮಸ್ಥರಿಗೆ. ಕಳೆದು ಮೂರು ದಿನಗಳಿಂದ ವ್ಯಾಘ್ರನ ಹುಡುಕಾಟದಲ್ಲಿರುವ ಅರಣ್ಯ ಸಿಬ್ಬಂದಿಗಳು ರಾತ್ರಿ ಹಗಲೆನ್ನದೆ ಸಕ್ರೀಯವಾಗಿ ಶೋಧಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಅಲ್ಲದೆ ಗ್ರಾಮಸ್ಥರ ಅನುಕೂಲಕಾಗಿ ಕಾಲ್‌ಸೆಂಟರ್‌ಗಳನ್ನು ಸ್ಥಾಪಿಸಿದ್ದು, ಹುಲಿಯ ಸುಳಿವು ಸಿಕ್ಕರೆ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಬಹುದು. ಈ ಕುರಿತು ಅಧಿಕಾರಿಗಳು ಜನತೆಗೆ ಮನವಿ ಮಾಡಿದ್ದಾರೆ. ಅರಣ್ಯ ಸಿಬ್ಬಂದಿ ಕೈಗೊಂಡಿರುವ 'ಆಪರೇಷನ್ ಟೈಗರ್'ಗೆ ಸೋಲಿಗರು ಸಾಥ್ ನೀಡಿರುವುದು ವಿಶೇಷ.
ಸೋಲಿಗರು ಹುಲಿಯ ಜಾಡು ಕಂಡುಹಿಡಿಯುವಲ್ಲಿ ನಿಪುಣರಾಗಿದ್ದು, ಅರಣ್ಯ ಸಿಬ್ಬಂದಿಗಳಿಗೆ ಸಹಾಯಕಾರಿಯಾಗಿದೆ. ಅಲ್ಲದೆ ಹುಲಿಯನ್ನು ಬಲೆಗೆ ಬೀಳಿಸುವ ಕೆಲಸದಲ್ಲಿ ತಜ್ಞರನ್ನು ನಿಯೋಜಿಸಲಾಗಿದೆ. ಅರಣ್ಯ ಇಲಾಕೆ ಅಧಿಕಾರಿ ಚಂದ್ರಕುಮಾರ್ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಕಳೆದ ಮೂರು ದಿನಗಳಿಂದ ಹುಲಿಯನ್ನು ಸೆರೆಹಿಡಿಯುವ ಕೆಲಸದಲ್ಲಿ ತೊಡಗಿರುವ ಅಧಿಕಾರಿಗಳು, ಶೀಘ್ರವೇ ಹುಲಿಯನ್ನು ಹಿಡಿಯುವ ಭರವಸೆ ವ್ಯಕ್ತಪಡಿಸಿದ್ದಾರೆ. ಆಪರೇಷನ್ ಟೈಗರ್ ಕಾರ್ಯಾಚರಣೆಗೆ ಆನೆಗಳನ್ನು ಬಳಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


