ವಿಷ್ಣು ಸ್ಮಾರಕ: ತಡೆ ಕೋರಿ ಪಿಐಎಲ್
ಕನ್ನಡದ ಮೇರು ಚಿತ್ರನಟ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ...

ಬೆಂಗಳೂರು: ಕನ್ನಡದ ಮೇರು ಚಿತ್ರನಟ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಡಾ.ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಂಗೇರಿ ಬಳಿಯ ಮೈಲಸಂದ್ರದ ಸರ್ವೇ ನಂ.22ರ ಎರಡು ಎಕರೆ ಜಾಗದಲ್ಲಿ ನಿರ್ಮಾಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸ್ಮಾರಕ ನಿರ್ಮಿಸಲು ಗುರುತಿಸಿರುವ ಜಾಗಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಬಫರ್ ವಲಯದ ವ್ಯಾಪ್ತಿಗೆ ಒಳಪಡುತ್ತದೆ. ರಾಜ್ಯ ಅರಣ್ಯ ಕಾಯ್ದೆ ಸೆಕ್ಷನ್ 41 ಹಾಗೂ 41(2) ಪ್ರಕಾರ ಮೀಸಲು ಅರಣ್ಯ ಪ್ರದೇಶವಿರುವ ಜಾಗದ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸುವಂತಿಲ್ಲ.
ನಿರ್ಮಾಣದಂತಹ ಕಾಮಗಾರಿ ನಡೆಸಿದರೆ ಅರಣ್ಯ ಸಂಪತ್ತು ನಾಶವಾಗುವ ಸಂಭವವಿದೆ. ಆದ್ದರಿಂದ ಸ್ಮಾರಕ ನಿರ್ಮಿಸಲು ಈ ಪ್ರದೇಶದಲ್ಲಿ ಅವಕಾಶ ನೀಡಬಾರದು ಎಂದು ಶರತ್ ಬಾಬ್ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ. ಸ್ಮಾರಕ ನಿರ್ಮಾಣ ಮಾಡುವ ಸಂಬಂಧ 2014ರ ಮಾ.3ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕು ಎಂದು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


