ನಾಳೆ ರಾತ್ರಿ ಎಂ.ಜಿ.ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ
ಎಂ.ಜಿ.ರಸ್ತೆ, ಬ್ರಿಗೇಡ್ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ...

ಬೆಂಗಳೂರು: ಎಂ.ಜಿ.ರಸ್ತೆಯಲ್ಲಿ ನಾಳೆ ರಾತ್ರಿ 8 ಗಂಟೆಯಿಂದ 1 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣ ಹಾಗೂ ಹೊಸ ವರ್ಷ ಸಂಭ್ರಮಾಚರಣೆಯ ಅಂಗವಾಗಿ ನಾಳೆ ಎಂ.ಜಿ ರಸ್ತೆಯಲ್ಲಿ ನಾಳೆ 8 ರಿಂದ 1 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿಷೇಧ ಹಾಕಲಾಗಿದೆ. ಹೊಸ ವರ್ಷವನ್ನು ಸಂಭ್ರಮಿಸಲು ಆಗಮಿಸುವವರು ಬದಲಿ ಮಾರ್ಗವನ್ನು ಬಳಸಬೇಕಾಗಿದೆ.
ಅಲ್ಲದೆ ನಾಳೆ ಈ ರಸ್ತೆಗಳಲ್ಲಿ ವಾಹನ ನಿಲುಗಡೆಗೂ ನಿಷೇಧ ಹಾಕಲಾಗಿದೆ. ರಾತ್ರಿ 9 ಗಂಟೆಯಿಂದ ಜ.1ರ ಬೆಳಿಗ್ಗೆ 6 ಗಂಟೆಯವರೆಗೆ ಎಂ.ಜಿ.ರಸ್ತೆ, ಬ್ರಿಗೇಡ್ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ ಎಂದು ಸಂಚಾರಿ ವಿಭಾಗದ ಹೆಚ್ಚುವರಿ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ದಯಾನಂದ್, ಹೊಸವರ್ಷ ಸಂಭ್ರಮಾಚರಣೆಯ ವೇಳೆ ಮದ್ಯಪಾನ ಸೇವಿಸಿ, ವಾಹನ ಚಲಾಯಿಸುವಂತಿಲ್ಲ. ಒಂದು ವೇಳೆ ಮದ್ಯಪಾನ ಮಾಡಿ ವಾಹನ ಓಡಿಸಿ ಸಿಕ್ಕಿಬ್ಬಿದ್ದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಕುಡಿದ ಅಮಲಿನಲ್ಲಿ ವಾಹನ ಓಡಿಸುವವರ ಲೈಸನ್ಸ್ ರದ್ದುಗೊಳಿಸುವಂತೆ ಈಗಾಗಲೇ ಸಂಚಾರಿ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಅವರು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


