ಜಿಲ್ಲಾ ಸುದ್ದಿ

ಕೇಂಬ್ರಿಡ್ಜ್ ಶಾಲೆ ನಿರ್ದೇಶಕ, ಪ್ರಾಂಶುಪಾಲೆಗೆ ಜಾಮೀನು

ಮಕ್ಕಳ ಸುರಕ್ಷತೆ ಮಾರ್ಗಸೂಚಿಗಳನ್ನು ಪಾಲಿಸದ ಇಂದಿರಾನಗರ ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆಯ...

ಕೇಂಬ್ರಿಡ್ಜ್ ಶಾಲೆ ನಿರ್ದೇಶಕ, ಪ್ರಾಂಶುಪಾಲೆಗೆ ಜಾಮೀನು
Published On :

ಬೆಂಗಳೂರು:  ಆರು ವರ್ಷದ ಬಾಲಕಿ ಮೇಲಿನ ಲೈಂಗಿಜ ದೌರ್ಜನ್ಯ ಪ್ರಕರಣದಲ್ಲಿ ಬಂಧಿತವಾಗಿದ್ದ ಕೇಂಬ್ರಿಡ್ಜ್ ಶಾಲೆಯ ಪ್ರಾಂಶುಪಾಲೆ ವೈಜಯಂತಿ ಹಾಗೂ ನಿರ್ದೇಶಕ ಪ್ರಮೋದ್ ಆರ್ಯ ಅವರಿಗೆ ಜಾಮೀನು ನೀಡಲಾಗಿದೆ.

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಮಾರ್ಗಸೂಚಿಗಳನ್ನು ಪಾಲಿಸದ ಇಂದಿರಾನಗರ ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆ ನಿರ್ದೇಶಕ ಹಾಗೂ ಪ್ರಾಂಶುಪಾಲರನ್ನು ಜೀವನ್ನಭೀಮಾ ನಗರ ಪೊಲೀಸರು ಶನಿವಾರ ಬಂಧಿಸಿದ್ದರು. ಶಾಲೆಯ ನಿರ್ದೇಶಕ ಪ್ರಮೋದ್ ಆರ್ಯ ಹಾಗೂ ಪ್ರಾಂಶುಪಾಲೆ ವೈಜಯಂತಿ ಅವರನ್ನು ಪೊಲೀಸರು ಶನಿವಾರ ಸಂಜೆ ಬಂಧಿಸಿ 4 ತಾಸುಗಳ ಕಾಲ ವಿಚಾರಣೆ ನಡೆಸಿದ್ದರು.
ಇವರ ವಿರುದ್ದ ಐಪಿಸಿ ಕಲಂ 188 'ಸರ್ಕಾರಿ ಅಧಿಕಾರಿ ನೀಡಿದ ಸೂಚನೆಗಳನ್ನು ಪಾಲಿಸದಿರುವುದು' ಹಾಗೂ ಕಲಂ 366'ವ್ಯಕ್ತಿಯ ಖಾಸಗಿ ಜೀವನಕ್ಕೆ ಅಪಾಯ ಉಂಟುಮಾಡುವುದು' ಅನ್ವಯ ಪ್ರರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

ಅಲ್ಲದೆ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಐವರು ಶಿಕ್ಷಕರಿಂದ ಪೊಲೀಸರು ಮಾಹಿತಿ ಸಂಗ್ರಹಿಸಿದರು. ವರ್ತೂರಿನ ವಿಬ್‌ಗ್ಯೊರ್ ಶಾಲೆಯಲ್ಲಿ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬಳಿಕ ಮಕ್ಕಳ ಸುರಕ್ಷತೆಗೆ ಸರ್ಕಾರ ಮಾರ್ಗಸೂಚಿ ನೀಡಿತ್ತು. ಆದರೆ, ನಿಗಧಿತ ಕಾಲವಾವಧಿಯಲ್ಲಿ ಶಾಲೆ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಲು ವಿಫಲವಾಗಿದ್ದು ಪರಿಶೀಲನೆ ವೇಳೆ ಕಂಡುಬಂದಿದೆ. 1200 ಮಕ್ಕಳು ವ್ಯಾಸಾಂಗ ಮಾಡುತ್ತಿರುವ ಶಾಲೆಯಲ್ಲಿ ಕೇವಲ 4 ಸಿಸಿ ಕ್ಯಾಮೆರಾ ಅಳವಡಿಕೆ, ಮಕ್ಕಳ ಚಲನವಲನಗಳ ಮೇಲೆ ನಿಗಾ ಇರಿಸಲು ಆವರಣದಲ್ಲಿ ಸಿಬ್ಬಂದಿ ಇಲ್ಲದಿರುವುದು ಸೇರಿದಂತೆ ಬಹುತೇಕ ಸುರಕ್ಷತಾ ನಿಯಮಗಳನ್ನು ಶಾಲೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ಇದೇ ವೇಳೆ ಬಂಧಿತ ಆರೋಪಿ ಜೈಶಂಕರ್‌ನ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಂಶುಪಾಲರು ಎಲ್ಲದಕ್ಕೂ ಜವಾಬ್ದಾರರಾಗಿದ್ದಾರೆ. ಬಾಲಕಿಯನ್ನು ಪುರುಷರ ಶೌಚಾಲಯಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗುವುದನ್ನು ಗಮನಿಸಲು ಶಿಕ್ಷಕರಿಗೆ ಹೇಗೆ ಸಾಧ್ಯವಾಗಿಲ್ಲ ಎಂದು ಅವರು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ನಗರ ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್, ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಓ) ರಮೇಶ್ ಭೇಟಿ ನೀಡಿ ಪಾಲಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದರು. ಸುರಕ್ಷತಾ ಕ್ರಮ ಕೈಗೊಳ್ಳುವ ಬಗ್ಗೆ ಸೋಮವಾರ ಶಾಲೆಗೆ ಭೇಟಿ ನೀಡಿ ಆಡಳಿತ ಮಂಡಳಿ ಹಾಗೂ ಪಾಲಕರ ಜತೆ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು ಎಂದು ಬಿಇಓ ರಮೇಶ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.