2 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
ದಿನದಿಂದ ದಿನಕ್ಕೆ ನಗರದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಸಿಲಿಕಾನ್ ಸಿಟಿ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಹುಟ್ಟಿಸುತ್ತದೆ...

ಬೆಂಗಳೂರು: ದಿನದಿಂದ ದಿನಕ್ಕೆ ನಗರದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಸಿಲಿಕಾನ್ ಸಿಟಿ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಹುಟ್ಟಿಸುತ್ತದೆ. ಕೇಂಬ್ರಿಡ್ಜ್ ಶಾಲೆಯ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಘಟನೆ ಮಾಸುವ ಮುನ್ನವೇ ಮತ್ತೊಂದು ಲೈಂಗಿಕ ದೌರ್ಜನ್ಯ ಘಟನೆ ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿ ಬೆಳಕಿಗೆ ಬಂದಿದೆ. 2 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಭಾನುವಾರ ನಡೆದಿದೆ.
ಸುರೇಶ್(29) ಎಂಬ ವ್ಯಕ್ತಿಯೇ ಈ ದೃಷ್ಕೃತ್ಯ ಎಸಗಿದ್ದಾನೆ. ಬಾಲಕಿಯ ಪೋಷಕರು ಬಡ ಕುಟುಂಬದವರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನೆರೆ ಮನೆಯವನಾಗಿರುವ ಆರೋಪಿ ಸುರೇಶ್ ಖಾಸಗಿ ಕಂಪನಿಯೊಂದರಲ್ಲಿ ಆಫೀಸ್ ಬಾಯ್ ಕೆಲಸ ಮಾಡುತ್ತಿದ್ದ. ನೆನ್ನೆ ಆಟವಾಡಲು ಹೊರಗಡೆ ಹೋಗಿದ್ದ ಬಾಲಕಿಯ ಮೇಲೆ ಸುರೇಶ್ ತನ್ನ ವಕ್ರ ನೋಟವನ್ನು ಬೀರಿದ್ದು, ಚಾಕಲೇಟ್ ಕೊಡಿಸುವ ನೆಪದಲ್ಲಿ ಮಗುವನ್ನು ಸಮೀಪದಲ್ಲಿದ್ದ ಆಟೋವೊಂದರ ಹಿಂಭಾಗಕ್ಕೆ ಕರೆದೊಯ್ದು ಈ ದುಷ್ಕೃತ್ಯ ಎಸಗಿದ್ದಾನೆ. ಆತನ ವರ್ತನೆಗೆ ಹೆದರಿದ ಬಾಲಕಿ ಕಿರುಚಿದ್ದಾಳೆ. ಮಗುವಿನ ಕಿರುಚಾಟ ಕೇಳಿದ ಪೊಷಕರು ಸ್ಥಳಕ್ಕೆ ಧಾವಿಸಿದ್ದಾರೆ. ಆರೋಪಿ ಸುರೇಶ್ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಪೋಷಕರು, ಮಗುವಿನ ಮಾಹಿತಿ ಮೇರೆಗೆ ಆರೋಪಿ ಸುರೇಶ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಸುರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆ ಹಾಗೂ ಐಪಿಸಿ 376ರ ಅಡಿ ಆರೋಪಿ ಸುರೇಶ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


