ಜಿಲ್ಲಾ ಸುದ್ದಿ

ಆಂಧ್ರ ಸಚಿವರ ವಿರುದ್ಧ ಕರ್ನಾಟಕದಲ್ಲಿ ಕೇಸ್ ದಾಖಲು

ಆಂಧ್ರ ಪ್ರದೇಶದ ಸಚಿವ ಡಾ.ಪಿ ನಾರಾಯಣ ಅವರ ವಿರುದ್ಧ ಕರ್ನಾಟಕದಲ್ಲಿ...

ಆಂಧ್ರ ಸಚಿವರ ವಿರುದ್ಧ ಕರ್ನಾಟಕದಲ್ಲಿ ಕೇಸ್ ದಾಖಲು
ಡಾ.ಪಿ ನಾರಾಯಣ
Published On :

ಬೆಂಗಳೂರು: ಆಂಧ್ರ ಪ್ರದೇಶದ ಸಚಿವ ಡಾ.ಪಿ ನಾರಾಯಣ ಅವರ ವಿರುದ್ಧ ಕರ್ನಾಟಕದಲ್ಲಿ ಪ್ರಕರಣ ದಾಖಲಾಗಿದೆ.

ಅನುಮತಿ ಪಡೆಯದೇ ಇಂಗ್ಲೀಷ್ ಮಾಧ್ಯಮ ಶಾಲೆ ನಡೆಸುತ್ತಿರುವ ಆರೋಪದ ಮೇಲೆ ಪಿ ನಾರಾಯಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಾರಾಯಣ ಇ-ಟೆಕ್ನೋ ಶಾಲೆಯ ಅಧ್ಯಕ್ಷ ನಾರಾಯಣ್ ಅವರು ಸರ್ಕಾರ ಅನುಮತಿ ಪಡೆಯದೆಯೇ 16 ಶಾಖೆಗಳನ್ನು ಹೊಂದಿರುವ ಶಾಲೆಗಳನ್ನು ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ನಡೆಸುತ್ತಿದ್ದಾರೆ.

ಈ ಸಂಬಂಧ ನಗರದ ಆಡುಗೋಡಿಯಲ್ಲಿ ನಾರಾಯಣ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ನಾರಾಯಣ ಹಾಗೂ ಶಾಲೆಯ ಪ್ರಾಂಶುಪಾಲರಾದ ರಮಾದೇವಿ ಸೇರಿದಂತೆ 8 ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬ್ಲಾಕ್ ಶಿಕ್ಷಣ ಅಧಿಕಾರಿ ಮುನಿರೆಡ್ಡಿ ಅವರು ಸೆಕ್ಷನ್ 420ರಡಿಯಲ್ಲಿ ಮತ್ತು ಆರ್‌ಟಿಇ ಕಾಯ್ದೆ ಅಡಿ ನಾರಾಯಣ ಇ-ಟೆಕ್ನೋ ಶಾಲೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಶಾಲೆಯ ಆಡಳಿತ ಮಂಡಳಿಗೆ ನೋಟೀಸ್ ನೀಡಿಲಾಗಿದೆ. ಆದರೆ, ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮುನಿರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.